ರಾಮನಾಥಪುರ: ಕೊಡಗು ಮತ್ತು ಹಾಸನ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಹಾಗೂ ಅಖಿಲ ಭಾರತ ಸನ್ಯಾಸಿ ಸಂಘದ ಆಶ್ರಯದಲ್ಲಿ, ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಮತ್ತು ನಮಾಮಿ ಕಾವೇರಿ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ಕಾವೇರಿ ಜಾಗೃತಿ ಯಾತ್ರೆಯ ಅಂಗವಾಗಿ ರಾಮನಾಥಪುರದಲ್ಲಿ ಕಾವೇರಿ ನದಿಗೆ ಮಹಾ ಆರತಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ವತಿಯಿಂದ ಕಿರಿಕೊಡ್ಲಿ ಮಠದ ಶ್ರೀಗಳಿಗೆ ಪಾದಪೂಜೆ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯಾಧ್ಯಕ್ಷ ಚಂದ್ರಮೋಹನ್, ಹಾಸನ ಜಿಲ್ಲಾಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಉಪಾಧ್ಯಕ್ಷ ಆರ್.ಕೆ. ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಸಿದ್ದರಾಜು ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ವರದಿ ಕುಮಾರಸ್ವಾಮಿ ರಾಮನಾಥಪುರ
