ಚನ್ನರಾಯಪಟ್ಟಣ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಪತ್ರಿಕಾ ಮಾಧ್ಯಮ ಕ್ಷೇತ್ರದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಐ.ಕೆ.ಮಂಜುನಾಥ್ ಅವರಿಗೆ ಚನ್ನರಾಯಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಶುಭ ಹಾರೈಸಿದ್ದಾರೆ.
ಶ್ರೀಯುತ ಐ ಕೆ ಮಂಜುನಾಥ್ ರವರು ಚನ್ನರಾಯಪಟ್ಟಣ ತಾಲೂಕಿನಲ್ಲಿ ಕಳೆದ 12 ವರ್ಷಗಳಿಂದ ಪತ್ರಿಕೋದ್ಯಮ ಮತ್ತು ಮಾಧ್ಯಮ ಸೇವೆ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇವರ ಪತ್ರಿಕೋದ್ಯಮದ ನಿರಂತರ ಸೇವೆಯನ್ನು ಪರಿಗಣಿಸಿದ ತಾಲೂಕು ಆಡಳಿತವು ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಿದೆ.
