ಶ್ಲೋಕ – 16
ತತ್ರೈವಂ ಸತಿ ಕರ್ತಾರಮಾತ್ಮಾನಂ ಕೇವಲಂ ತು ಯಃ ।
ಪಶ್ಯತ್ಯಕೃತಬುದ್ಧಿತ್ವಾನ್ನ ಸ ಪಶ್ಯತಿ ದುರ್ಮತಿಃ ॥೧೬॥
ತತ್ರ ಏವಂ ಸತಿ ಕರ್ತಾರಮ್ ಆತ್ಮಾನಂ ಕೇವಲಂ ತು ಯಃ ।
ಪಶ್ಯತಿ ಅಕೃತ ಬುದ್ಧಿತ್ವಾತ್ ನ ಸಃ ಪಶ್ಯತಿ ದುರ್ಮತಿಃ –ಅದು ಹೀಗಿರುತ, ಏನೂ ಮಾಡದ ತನ್ನನ್ನು ‘ಮಾಡುವವನು’ ಎಂದು [ತಾನೊಬ್ಬನೇ ಎಲ್ಲ ಮಾಡಿದವನು ಎಂದು] ತಿಳಿದವನು ಬುದ್ಧಿಗೇಡಿ. ಆ ತಿಳಿಗೇಡಿಗಳಿಗೆ ಏನೂ ತಿಳಿದಿಲ್ಲ.
ಈ ರೀತಿ ಐದು ಕಾರಣಗಳು ನಮ್ಮ ಕ್ರಿಯೆಯಲ್ಲಿ ಪಾತ್ರಧಾರಿಗಳಾಗಿರುವಾಗ, ಅದನ್ನು ಅರಿಯದೆ, “ನಾನು ಮಾಡಿದೆ” ಎಂದು ಅಹಂಕಾರ ಪಟ್ಟುಕೊಳ್ಳುವುದು ಅರ್ಥಶೂನ್ಯ. ಈ ರೀತಿ ತಿಳಿದುಕೊಳ್ಳುವವರು ಬುದ್ಧಿಗೇಡಿಗಳು. ಇಂಥಹ ಮತಿಗೇಡಿಗಳು ಏನನ್ನೂ ತಿಳಿದಿಲ್ಲ.
