ಚನ್ನರಾಯಪಟ್ಟಣ: ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿರುವ ಸುದೀರ್ಘ ಹಾಗೂ ನಿರಂತರ ಸೇವೆಯನ್ನು ಗುರುತಿಸಿ, ಸುವರ್ಣ ಟೈಮ್ಸ್ ಆಫ್ ಕರ್ನಾಟಕ ದಿನಪತ್ರಿಕೆಯ ತಾಲೂಕು ವರದಿಗಾರ ಹಾಗೂ ಪತ್ರಕರ್ತ ಐ ಕೆ ಮಂಜುನಾಥ್ ಅವರಿಗೆ ತಾಲೂಕು ಆಡಳಿತ ವತಿಯಿಂದ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು.

ಕಳೆದ 12 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪತ್ರಕರ್ತ ಮಂಜುನಾಥ್ ಐ ಕೆ ಅವರು ಸ್ಥಳೀಯ ಪತ್ರಿಕೆಯಾದ ಹಾಸನ ಪ್ರಭ ದಿನಪತ್ರಿಕೆಯ ಮೂಲಕ 2014ರಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದರು.
ಮುದ್ರಣ ಮಾಧ್ಯಮದ ಜೊತೆಗೆ 2022ರಲ್ಲಿ ನಮ್ಮ ಹಾಸನ ಟಿವಿ ಎಂಬ ದೃಶ್ಯ
ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಪತ್ರಿಕೋದ್ಯಮ ಕ್ಷೇತ್ರದ ಸುದೀರ್ಘ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ತಾಲೂಕು ಆಡಳಿತ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ತಾಲೂಕು ಮಟ್ಟದ ಗೌರವಕ್ಕೆ ಆಯ್ಕೆ ಮಾಡಿರುವುದು ಪತ್ರಿಕಾ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ.

ಇದೇ ಸಂದರ್ಭದಲ್ಲಿ ಶಾಸಕರಾದ ಸಿ ಎನ್ ಬಾಲಕೃಷ್ಣ, ತಾಲೂಕು ದಂಡಾಧಿಕಾರಿಗಳಾದ ಜೆ ಎಸ್ ಶಂಕರಪ್ಪ, ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳಾದ ಜಿ ಆರ್ ಹರೀಶ್, ಸಬ್ ರಿಜಿಸ್ಟರ್ ದೇವರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಎಚ್ಎನ್ ಲೋಕೇಶ್, ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಆನಂದ್ ಕಾಳೆನಹಳ್ಳಿ, ಕರ್ನಾಟಕ ರಕ್ಷಣಾ ವೇದಿಕೆಯ ಸಾಂಸ್ಕೃತಿ ಘಟಕದ ಜಿಲ್ಲಾಧ್ಯಕ್ಷರಾದ ಬಿ ಪಿ ಧರ್ಮರಾಜು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.
– ಮಂಜುನಾಥ್ ಐ.ಕೆ.
