ಅರಕಲಗೂಡು: ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಅರವಿಂದ್ ಹಾಗೂ ಅವರ ಪತ್ನಿ, ಡಾ. ಅಂಬೇಡ್ಕರ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಲಗ್ನ ಅರವಿಂದ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಅರಕಲಗೂಡು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹೊನ್ನವಳ್ಳಿ ಸತೀಶ್, ಎ. ಮಂಜು ಬಳಗದ ಸಮಿತಿ ಸದಸ್ಯ ಕೊಣನೂರು ಹೊಯ್ಸಳ, ರಂಗಾಪುರ ಕಮಲಮ್ಮ, ದೊಡ್ಡಮಗ್ಗೆ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದು, ವೈದ್ಯ ದಂಪತಿಯನ್ನು ಗೌರವಿಸಿದರು.
– ಕುಮಾರಸ್ವಾಮಿ ಎಂ.ಎನ್.
