ಕೆ.ಆರ್.ಪೇಟೆ: ದಿವಂಗತ ನಟ ಡಾ. ಪುನೀತ್ ರಾಜ್ಕುಮಾರ್ ಅವರ ಐದನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ರಕ್ತದಾನ ಹಾಗೂ ಅನ್ನದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಗಣ್ಯರು, ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 75 ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಸಾವಿರಾರು ಮಂದಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನ್ನದಾನದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜಸೇವಕ ಹಾಗೂ ಆರ್ಟಿಒ ನೌಕರರ ಸಂಘದ ಅಧ್ಯಕ್ಷ ಆರ್ಟಿಒ ಮಲ್ಲಿಕಾರ್ಜುನ್, ಪುನೀತ್ ರಾಜ್ಕುಮಾರ್ ಅವರ ಅಪ್ಪಟ ಅಭಿಮಾನಿ ಕೆ.ಎಲ್. ಮಹೇಶ್ ಅವರು ದಾನಿಗಳ ಸಹಕಾರದಿಂದ ಪುನೀತ್ ಅವರ ಪುತ್ಥಳಿ ಪ್ರತಿಷ್ಠಾಪಿಸಿ, ಕಳೆದ ಐದು ವರ್ಷಗಳಿಂದ ನಿರಂತರವಾಗಿ ರಕ್ತದಾನ, ಅನ್ನದಾನ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.

ಈ ವರ್ಷವೂ ಸುಮಾರು 75 ಮಂದಿ ರಕ್ತದಾನ ಮಾಡಿರುವುದು ಪುನೀತ್ ಅವರ ಸಾರ್ಥಕ ಸೇವೆಯನ್ನು ಸ್ಮರಿಸುವಂತಿದೆ. ಪುನೀತ್ ಅವರು ಯಾರಿಗೂ ತಿಳಿಯದಂತೆ ಮಾಡುತ್ತಿದ್ದ ದಾನ-ಧರ್ಮಗಳು ಅವರ ನಿಧನದ ನಂತರವೂ ಅವರನ್ನು ಜನಮಾನಸದಲ್ಲಿ ಜೀವಂತವಾಗಿರಿಸಿವೆ. ರಾಜ್ಯಾದ್ಯಂತ ನಡೆಯುತ್ತಿರುವ ಅಪ್ಪು ಸ್ಮರಣೆ ಕಾರ್ಯಕ್ರಮಗಳೇ ಇದಕ್ಕೆ ಸಾಕ್ಷಿ ಎಂದು ತಿಳಿಸಿದರು.
ಗಣ್ಯರಿಂದಲೂ ರಕ್ತದಾನ:
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರಕುಮಾರ್, ಸಮಾಜಸೇವಕ ಆರ್ಟಿಒ ಮಲ್ಲಿಕಾರ್ಜುನ್, ಪಾಂಡವಪುರ ಉಪವಿಭಾಗಾಧಿಕಾರಿ ಕೆ. ಶ್ರೀನಿವಾಸ್ ಅವರ ಧರ್ಮಪತ್ನಿ ನಂದಿನಿ ಶ್ರೀನಿವಾಸ್, ಮನ್ಮುಲ್ ನಿರ್ದೇಶಕ ಡಾಲು ರವಿ, ಎಂ.ಬಿ. ಹರೀಶ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ. ಕುಮಾರ್, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವಳಗೆರೆಮೆಣಸ ಗ್ಯಾಸ್ ಕುಮಾರ್, ತಾಲೂಕು ಜಯಕರ್ನಾಟಕ ಸಂಘಟನೆಯ ಯುವ ಘಟಕದ ಅಧ್ಯಕ್ಷ ಕೆ.ಎಲ್. ಮಹೇಶ್, ಹಿರಿಯ ಪತ್ರಕರ್ತ ಆರ್. ಶ್ರೀನಿವಾಸ್, ಬಳ್ಳೇಕೆರೆ ವಿಜಯಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಎಳನೀರು ವ್ಯಾಪಾರಿಗಳ ಸಂಘದ ಅಧ್ಯಕ್ಷ ಭಾರತೀಪುರ ಪುಟ್ಟಣ್ಣ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ನಾಟನಹಳ್ಳಿ ಗಂಗಾಧರ್, ಪುರಸಭೆ ಮಾಜಿ ಸದಸ್ಯರಾದ ಕೆ.ಆರ್. ನೀಲಕಂಠ, ಕೆ.ಎಸ್. ರಾಜೇಶ್, ತಾಲೂಕು ಅಪ್ಪು ಯುವ ಸಾಮ್ರಾಜ್ಯ ಪ್ರಜಾಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಎಲ್. ಮಹೇಶ್, ಚನ್ನರಾಯಪಟ್ಟಣ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಭರತ್, ಕರವೇ ತಾಲೂಕು ಅಧ್ಯಕ್ಷ ಟೆಂಪೋ ಶ್ರೀನಿವಾಸ್, ನಗರ ಘಟಕದ ಅಧ್ಯಕ್ಷ ಮದನ್ ಗೌಡ, ಜಯಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಸೋಮಶೇಖರ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಪ್ಪು ಸೇವಾ ಟ್ರಸ್ಟ್ನ ಪದಾಧಿಕಾರಿಗಳಾದ ಸ್ವೀಟ್ ರಾಮಣ್ಣ, ಆಟೋ ರಾಮಣ್ಣ, ಚಂದ್ರು, ಅನಿಲ್, ಶ್ರೀನಿಧಿ, ಗೋವಿಂದರಾಜ್, ಮಂಜುನಾಥ್, ಪ್ರಜ್ವಲ್, ಅಶೋಕ್, ರಾಘು, ಹರೀಶ್, ಸತೀಶ್, ಪವಿತ್, ಪ್ರಭು, ಲೋಕೇಶ್, ಶರತ್, ದಿಲೀಪ್, ಶಶಿ, ರಾಜು, ದೇವರಾಜ್, ಜಗದೀಶ್, ಸಂದೀಪ್, ಮನು, ಧರಣಿ ಸೇರಿದಂತೆ ನೂರಾರು ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
– ಶ್ರೀನಿವಾಸ್ ಆರ್.
