ಚನ್ನರಾಯಪಟ್ಟಣ: ಯೋಗ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಗಣನೀಯ ಸಾಧನೆ ಮಾಡಿರುವ ಯುವ ಯೋಗ ಸಾಧಕಿ ಯು. ಕೀರ್ತನಾ ಅವರಿಗೆ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಡಳಿತದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅತಿ ಚಿಕ್ಕ ವಯಸ್ಸಿನಲ್ಲಿಯೇ ಯೋಗ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಕೀರ್ತನಾ ಅವರ ಪ್ರತಿಭೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಈ ಸಂದರ್ಭದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ, ತಾಲೂಕು ದಂಡಾಧಿಕಾರಿ, ಜೆ.ಎಸ್. ಶಂಕರಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರೀಶ್, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್.ಎನ್. ಲೋಕೇಶ್, ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಆನಂದ್ ಕುಮಾರ್ ಕಾಳೇನಹಳ್ಳಿ, ಯು. ಉಮೇಶ್, ವಾಣಿ ಉಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
– ಮಂಜುನಾಥ್ ಐ. ಕೆ.
