ಕೆ.ಆರ್.ಪೇಟೆ: ಕಾಂಗ್ರೆಸ್ ಮುಖಂಡ ಸ್ಟಾರ್ ಚಂದ್ರು ಅವರು ತಮ್ಮ ಪುತ್ರ ಚಿರಾಂತ್ ಅವರ ವಿವಾಹದ ಆಮಂತ್ರಣ ಪತ್ರಿಕೆ ವಿತರಿಸಲು ನ.7ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಕೆ.ಆರ್.ಪೇಟೆಗೆ ಆಗಮಿಸಲಿದ್ದಾರೆ.
ಮೊದಲು ಅವರು ಕೆ.ಆರ್.ಪೇಟೆಯ ಪ್ರವಾಸಿ ಮಂದಿರಕ್ಕೆ ಆಗಮಿಸಿ,ಕಾಂಗ್ರೆಸ್ ಮುಖಂಡರು ಕಾರ್ಯಕರ್ತರಿಗೆ ಆಮಂತ್ರಣ ಪತ್ರಿಕೆ ವಿತರಿಸಲಿದ್ದಾರೆ. ಅದರ ಬಳಿಕ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಶ್ರೀ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಕಚೇರಿಗೆ (ಆರ್ಟಿಓ ಮಲ್ಲಿಕಾರ್ಜುನ್ ಕಚೇರಿ) ಆಗಮಿಸಲಿದ್ದಾರೆ.
ಆರ್ಟಿಓ ಮಲ್ಲಿಕಾರ್ಜುನ್ ಕಚೇರಿಗೆ ಭೇಟಿ ನೀಡಿ, ಅಲ್ಲಿಯೂ ಮಗನ ವಿವಾಹದ ಆಮಂತ್ರಣ ಪತ್ರಿಕೆಯನ್ನು ವಿತರಿಸಲಿದ್ದಾರೆ ಶನಿವಾರ ಶ್ರೀ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಕಚೇರಿಗೆ ಬರುವ ಸಾರ್ವಜನಿಕರಿಗೆ ಉಪಹಾರವನ್ನು ಶ್ರೀ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ಕೈಗೊಂಡಿದೆ ಎಂದು ಶ್ರೀ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟೀ ಗಂಜಿಗೆರೆ ಮಹೇಶ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು, ಮಾಧ್ಯಮ ಮಿತ್ರರು, ಸ್ಟಾರ್ ಚಂದ್ರು ಅವರ ಹಿತೈಷಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಆತ್ಮೀಯ ಸಮಾಗಮದಲ್ಲಿ ಪಾಲ್ಗೊಳ್ಳಬೇಕೆಂದು ಸ್ಟಾರ್ ಚಂದ್ರು ಅವರ ಕಚೇರಿ ಪ್ರಕಟಣೆ ಮೂಲಕ ಮನವಿ ಮಾಡಿದೆ.
