ಶ್ಲೋಕ – 23
ನಿಯತಂ ಸಂಗರಹಿತಮರಾಗದ್ವೇಷತಃ ಕೃತಮ್ ।
ಅಫಲಪ್ರೇಪ್ಸುನಾ ಕರ್ಮ ಯತ್ ತತ್ ಸಾತ್ತ್ವಿಕಮುಚ್ಯತೇ ॥೨೩॥
ನಿಯತಮ್ ಸಂಗರಹಿತಮ್ ಆರಾಗ ದ್ವೇಷತಃ ಕೃತಮ್ ।
ಅಫಲಪ್ರೇಪ್ಸುನಾ ಕರ್ಮ ಯತ್ ತತ್ ಸಾತ್ತ್ವಿಕಮ್ ಉಚ್ಯತೇ – ಹಚ್ಚಿಕೊಳ್ಳದೆ, ಮೆಚ್ಚು-ಕಿಚ್ಚುಗಳಿಗೊಳಗಾಗದೆ, ಫಲದ ಹಂಬಲವಿರದೆ ಮಾಡಿದ ವಿಹಿತವಾದ ಕರ್ಮ ಸಾತ್ವಿಕ ಎನಿಸುತ್ತದೆ.
ನಮಗೆ ಪ್ರಾಪ್ತವಾಗಿರುವ ವಿಹಿತಕರ್ಮವನ್ನು ಭಗವಂತನ ಪೂಜಾರೂಪವಾಗಿ ಮಾಡಿದಾಗ ಅದು ಸಾತ್ವಿಕ ಕರ್ಮವಾಗುತ್ತದೆ. ಈ ಕರ್ಮದಲ್ಲಿ ಯಾವುದೇ ರಾಗ-ದ್ವೇಷವಿಲ್ಲ; ಫಲಾಪೇಕ್ಷೆಯಿಲ್ಲ; ಯಾವುದೇ ರೀತಿ ಅಂಟಿಸಿಕೊಳ್ಳುವಿಕೆಯಿಲ್ಲ.ಶ್ರದ್ಧಾ-ಭಕ್ತಿಯಿಂದ, ನಿರ್ಲಿಪ್ತತೆಯಿಂದ, ಕರ್ತವ್ಯವನ್ನು ನಿರ್ವಂಚನೆಯಿಂದ ಭಗವದರ್ಪಣಾಭಾವದಿಂದ ಮಾಡುವ ಕರ್ಮ ಸಾತ್ವಿಕ ಕರ್ಮ.
