ಹಾಸನ: ವಿವಿಧ ಮಠಗಳ ಐವರು ಪರಮಪೂಜ್ಯ ಜಗದ್ಗುರುಗಳು ಹಾಗೂ ಸ್ವಾಮೀಜಿಗಳು ಅಕ್ಟೋಬರ್ 8ರಂದು ಹಾಸನಕ್ಕೆ ಭೇಟಿ ನೀಡಿ ಶ್ರೀ ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದರು.
ಭಗೀರಥ ಪೀಠದ ಶ್ರೀ ಜಗದ್ಗುರು ಪುಷ್ಯೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಜಗದ್ಗುರು ಶಾಂತವೀರ ಮಹಾಸ್ವಾಮೀಜಿ, ಚಿತ್ರದುರ್ಗದ ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಮಹಾಸ್ವಾಮೀಜಿ, ಹೊಸದುರ್ಗದ ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹಾಗೂ ಅರಸೀಕೆರೆಯ ಯಳನಾಡು ಕ್ಷೇತ್ರದ ಶ್ರೀ ಬಸವರಾಜೇಂದ್ರ ದೇಶಿಕೇಂದ್ರ ಮಹಾಸ್ವಾಮಿಗಳು ದೇವರ ದರ್ಶನ ಪಡೆದರು.

ನಂತರ ಹಾಸನದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ ಸ್ವಾಮೀಜಿಗಳಿಗೆ ಮಠದ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶಾಖಾ ಮಠದ ವ್ಯವಸ್ಥಾಪಕ ಚಂದ್ರಶೇಖರ್, ರತನ್, ರಘು, ಹಾಸನ ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಪುನೀತ್ ಪಟೇಲ್, ಹಾಸನ ತಾಲೂಕು ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
