ಶ್ಲೋಕ – 27
ರಾಗೀ ಕರ್ಮಫಲಪ್ರೇಪ್ಸುರ್ಲುಬ್ಧೋ ಹಿಂಸಾತ್ಮಕೋSಶುಚಿಃ ।
ಹರ್ಷಶೋಕಾನ್ವಿತಃ ಕರ್ತಾ ರಾಜಸಃ ಪರಿಕೀರ್ತಿತಃ ॥೨೭॥
ರಾಗೀ ಕರ್ಮಫಲ ಪ್ರೇಪ್ಸು ಲುಬ್ಧಃ ಹಿಂಸಾ ಆತ್ಮಕಃ ಅಶುಚಿಃ ।
ಹರ್ಷ ಶೋಕ ಅನ್ವಿತಃ ಕರ್ತಾ ರಾಜಸಃ ಪರಿಕೀರ್ತಿತಃ – ಹಚ್ಚಿಕೊಳ್ಳುವವ, ಫಲ ದೊರೆತಾಗ ಹಿಗ್ಗುವವ, ಇರದಾಗ ಕುಗ್ಗುವವ –ಇಂಥ ಕರ್ತಾರ ರಾಜಸ ಎನಿಸುತ್ತಾನೆ.
ರಾಜಸನಾದವನು ಒಳ್ಳೆಯ ಕೆಲಸ ಮಾಡುತ್ತಾನೆ ಆದರೆ ಅದರಲ್ಲಿ ‘ಹರ್ಷ ಶೋಕ’ ತುಂಬಿರುತ್ತದೆ. ಆತ ತನ್ನ ಕೆಲಸದಲ್ಲಿ ಯಶಸ್ವೀಯಾದಾಗ ಆಕಾಶಕ್ಕೇರುತ್ತಾನೆ, ಕೆಲಸ ಕೈಗೂಡದಾಗ ಪಾತಾಳಕ್ಕೆ ಕುಸಿಯುತ್ತಾನೆ. ಇದಕ್ಕೆ ಮೂಲ ಕಾರಣ ರಾಜಸನಾದವನು ತನ್ನ ಪ್ರತಿಯೊಂದು ಕರ್ಮವನ್ನು ಫಲಾಪೇಕ್ಷೆಯಿಂದಲೇ ಮಾಡುವುದು. ಆತ ಕರ್ಮವನ್ನು ಅಂಟಿಸಿಕೊಂಡು ಕರ್ಮಫಲದ ನಿರೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾನೆ. ಮಾಡುವ ಕಾರ್ಯದಲ್ಲಿ ಲೋಭ, ಶ್ರದ್ಧೆ ಇಲ್ಲದೆ ಮಾಡುವುದು, ಕರ್ಮ ಮಾಡುವಾಗ ಮಾನಸಿಕ ಸ್ವಚ್ಛತೆ ಇಲ್ಲದೇ ಇರುವುದು ರಾಜಸನಾದವನ ಸ್ವಭಾವ.
