ಕೊರಟಗೆರೆ: ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿಯ ಹಿಂದುಸ್ತಾನ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ತುಂಬಾ ವಿಜೃಂಭಣೆಯಿಂದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕೊರಟಗೆರೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಫೈರೋಜಾ ಬೇಗಂ ರವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಫೈರೋಜಾ ಬೇಗಂ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕುವ ವಿಶೇಷ ಕಾರ್ಯಕ್ರಮವಾಗಿದ್ದು ಮಕ್ಕಳು ಸಂತೋಷದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕೆಂದು ಹೇಳಿದರು ಹಾಗೂ ಸಿ.ಆರ್.ಪಿ ಹನುಮಂತರಾಯ.ವಿ.ಹೆಚ್ ರವರು ಮಾತನಾಡಿ ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸುವುದೇ ಮುಖ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಗಂಗಮ್ಮ, ಬಿ.ಆರ್.ಪಿ.ಮಂಜುನಾಥ್, ಸಿ.ಆರ್.ಪಿ ಹನುಮಂತರಾಯ.ವಿ.ಹೆಚ್, ಕ್ಷೇತ್ರ ಸಮನ್ವಯ ಅಧಿಕಾರಿ ರುದ್ರೇಶ್, ಶಾಲೆಯ ಮುಖ್ಯ ಶಿಕ್ಷಕರಾದ ಯಾಸ್ಮಿನ್ ಸುಲ್ತಾನ್, ಶಿಕ್ಷಕರಾದ ಅಮೀನ್ ಖಾನ್, ಹಾಗೂ ಸಿಬ್ಬಂದಿ ವರ್ಗದವರು ಮತ್ತು ತೀರ್ಪುಗಾರರು, ಕ್ಲಸ್ಟರ್ ನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.
– ಚಂದ್ರಚೂಡ ಕೆ,ಬಿ
