ರಾಮನಾಥಪುರ: ನಮ್ಮ ಸನಾತನ ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಧಾರ್ಮಿಕ ಆಚರಣೆಗಳು ಮನಸ್ಸಿಗೆ ಉಲ್ಲಾಸ ಮತ್ತು ನೆಮ್ಮದಿ ನೀಡುತ್ತವೆ ಎಂದು ವಿಶ್ವ ವೀರಶೈವ ಲಿಂಗಾಯತ ಮಹಾವೇದಿಕೆಯ ರಾಜ್ಯ ಉಪಾಧ್ಯಕ್ಷ ಜೆ.ಎಸ್.ಎಸ್. ಪಂಚಾಕ್ಷರಿ ಅಭಿಪ್ರಾಯಪಟ್ಟರು.
ರಾಮನಾಥಪುರ ಹೋಬಳಿಯ ಬಸವಪಟ್ಟಣ ಸಮೀಪ ಕಾವೇರಿ ನದಿಯಲ್ಲಿ ಆಯೋಜಿಸಿದ್ದ ಬಿಂದಿಗೆ ಉತ್ಸವದಲ್ಲಿ ಪಾಲ್ಗೊಂಡು, ಪೂಜಾ ಕೈಂಕರ್ಯಗಳ ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ನಡೆಯುವ ಇಂತಹ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಹತ್ವದ ಕಾರ್ಯಗಳಾಗಿವೆ ಎಂದರು.
ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಿರುವುದು ಹಾಗೂ ಸಾಮೂಹಿಕವಾಗಿ ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿ ದೊರೆಯುತ್ತದೆ ಎಂದು ತಿಳಿಸಿದರು.
ಗೌರವ ಸಮರ್ಪಣೆ: ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ವಾಗೀಶ್, ರವಿಕುಮಾರ್, ಯಶವಂತ್, ವಿಕ್ಕಿ, ಸುಧಾಕರ್, ಯಗಟಿ ಕುಮಾರ್ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತರು ಬಿಂದಿಗೆ ಉತ್ಸವದಲ್ಲಿ ಭಾಗವಹಿಸಿದ್ದರು.
– ಕುಮಾರಸ್ವಾಮಿ ಎಂ.ಎನ್.
