ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿ ಜೆಡಿಎಸ್ ಪಕ್ಷದ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ಗೋವಿನಕೆರೆ ಗ್ರಾಮದ ವೈರಿಮುಡಿಗೌಡ ಅವರನ್ನು ನೇಮಕ ಮಾಡಲಾಗಿದೆ.
ಗೋವಿನಕೆರೆ ಗ್ರಾಮದ ದಿವಂಗತ ನಿಂಗೇಗೌಡ ಮತ್ತು ಲಕ್ಷ್ಮಮ್ಮ ದಂಪತಿಯ ಪುತ್ರರಾದ ವೈರಿಮುಡಿಗೌಡ ಅವರು ಕಳೆದ 13 ವರ್ಷಗಳಿಂದ ಜೆಡಿಎಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಇವರು, ನಿವೃತ್ತಿಯ ನಂತರವೂ ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ ಹಾಗೂ ಅವರ ಸಮಾಜಮುಖಿ ಕಾರ್ಯಗಳನ್ನು ಪರಿಗಣಿಸಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಅವರು ವೈರಿಮುಡಿಗೌಡ ಅವರನ್ನು ಬಾಗೂರು ಹೋಬಳಿ ಜೆಡಿಎಸ್ ಪಕ್ಷದ ಪ್ರಧಾನ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಘೋಷಿಸಿದ್ದಾರೆ.

ಈ ನೇಮಕದಿಂದ ಬಾಗೂರು ಹೋಬಳಿ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.
– ಮಂಜುನಾಥ್ ಐ.ಕೆ.
