ತುಮಕೂರು: ವೈಸಿರಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್&ಟೆಕ್ನಾಲಜಿಯ ಉದ್ಯೋಗ ನಿಯೋಜನಾ ವಿಭಾಗದ ವತಿಯಿಂದ‘ವಿ-ಪ್ರೈಡ್ 26’ ಕಾರ್ಯಕ್ರಮವನ್ನು ವೈಸಿರಿ ಕ್ಯಾಂಪಸ್ನ ವಿಜಿ ಆಡಿಟೋರಿಯಂನಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯೋಗಾವಕಾಶ ಪಡೆದ ವಿದ್ಯಾರ್ಥಿಗಳಿಗೆ ಆಫರ್ ಲೆಟರ್ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ವೈಸಿರಿ ಕಾಲೇಜಿನ ಕಾರ್ಯದರ್ಶಿ ಎನ್.ಬಿ.ಪ್ರದೀಪ್ ಕುಮಾರ್ ರವರು, ಇಂದಿನ ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಜ್ಞಾನ, ಸಮಸ್ಯೆಗಳನ್ನು ವಿಶ್ಲೇಷಿಸುವ ಸಾಮರ್ಥ್ಯ, ಹೊಸ ರೀತಿಯಲ್ಲಿ ಯೋಚಿಸುವ ಕೌಶಲ್ಯ ಮತ್ತು ನಿರಂತರ ಕಲಿಕೆಯ ಮನೋಭಾವಬೆಳೆಸಿಕೊಳ್ಳಬೇಕು ಎಂದು ಹೇಳಿದರು.ವಿದ್ಯಾರ್ಥಿಗಳು ಉದ್ಯೋಗ ಕ್ಷೇತ್ರದ ಬದಲಾವಣೆಗಳಿಗೆ ಅನುಗುಣವಾಗಿ ತಮ್ಮ ಆಲೋಚನಾ ಕ್ರಮವನ್ನು ರೂಪಿಸಿಕೊಳ್ಳಬೇಕು.
ಯಾವುದೇ ಸಮಸ್ಯೆಯನ್ನು ಎದುರಿಸಿದಾಗ ಸಾಮಾನ್ಯವಾಗಿ ಯೋಚಿಸುವುದಕ್ಕಿಂತತಾAತ್ರಿಕವಾಗಿ ಹಾಗೂ ವಿಶ್ಲೇಷಣಾತ್ಮಕವಾಗಿ ಯೋಚಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.ಇದೇ ಸಂದರ್ಭದಲ್ಲಿಕೃತಕ ಬುದ್ಧಿಮತ್ತೆ (ಎಐ)ಕುರಿತು ಮಾತನಾಡಿದ ಅವರು, ಇಂದಿನ ತಂತ್ರಜ್ಞಾನ ಕ್ಷೇತ್ರದಲ್ಲಿ ಎಐ ಮಹತ್ವದ ಪಾತ್ರ ವಹಿಸುತ್ತಿದ್ದು, ಅದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಮೂಲಭೂತ ಅರಿವು ವಿದ್ಯಾರ್ಥಿಗಳಿಗೆ ಇರಬೇಕು ಎಂದು ಹೇಳಿದರು. ಎಐ ಮಾನವನ ಆಲೋಚನೆ ಮತ್ತು ಕಾರ್ಯವಿಧಾನವನ್ನು ತಂತ್ರಜ್ಞಾನದ ಮೂಲಕ ಹೇಗೆ ಅನುಕರಿಸುತ್ತದೆ, ಮಾಹಿತಿಯನ್ನು ಹೇಗೆ ವಿಶ್ಲೇಷಿಸುತ್ತದೆ ಹಾಗೂ ಅದನ್ನು ವಿವಿಧ ಕ್ಷೇತ್ರಗಳಲ್ಲಿ ಹೇಗೆ ಬಳಸಲಾಗುತ್ತಿದೆ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ ಅವರು, ಆಫರ್ ಲೆಟರ್ ಪಡೆದ ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ, ತಾಂತ್ರಿಕ ಕೌಶಲ್ಯ ಮತ್ತು ನಿರಂತರ ಕಲಿಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿ -ಟೆಕ್ ಸಲ್ಯೂಷನ್ ಸಿಇಓ ಪ್ರೇಮ್ ಅವರು, ವೈಸಿರಿ ಕಾಲೇಜಿನ ಪ್ರಾಂಶುಪಾಲರಾದ ಹುಮೇರಫರ್ವಿನ್, ಅಚ್ಚಲ್.ಎಸ್. ಕಾರ್ಯಕ್ರಮದಲ್ಲಿ ವೈಸಿರಿ ಕಾಲೇಜಿನ ಬೋಧನಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
– ಚಂದ್ರಚೂಡ ಕೆ.ಬಿ.
