ಚನ್ನರಾಯಪಟ್ಟಣ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪಟ್ಟಣದ ವೈದ್ಯ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭವು ಅರ್ಥಪೂರ್ಣವಾಗಿ ಜರುಗಿತು.
ಪಟ್ಟಣದ ವೈದ್ಯ ಕಾಲೇಜಿನ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪದಾಧಿಕಾರಿಗಳಾಗಿ ಐದು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನಾ ಪ್ರಮಾಣಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಎ. ಗೋಪಾಲಸ್ವಾಮಿ, ನುಗ್ಗೆಹಳ್ಳಿ ಪುರವರ್ಗ ಮಠದ ಪೂಜ್ಯ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಸಾಪ ತಾಲ್ಲೂಕು ಅಧ್ಯಕ್ಷ ಎಚ್.ಎನ್. ಲೋಕೇಶ್ ಹಡೇನಹಳ್ಳಿ, ವೈದ್ಯ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎಲ್. ಅರುಣ್, ಕಸಾಪ ಮಾಜಿ ಅಧ್ಯಕ್ಷ ಪ್ರೊ. ಹೆಚ್. ಸಿದ್ದೇಗೌಡ, ಹಿರಿಯ ಸಾಹಿತಿ ಬೆಳಗುಲಿ ಕೆಂಪಯ್ಯ, ನಾಗಪ್ಪ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಣತಿ ಆನಂದ್ ಕುಮಾರ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಕುಂಬಾರಹಳ್ಳಿ ರಮೇಶ್, ಅನಿಲ್ ಮರಗೂರು ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಪ್ರಕಾಶ್, ಶಿವನಗೌಡ ಪಾಟೀಲ್, ದಿಂಡಗೂರು ಗೋವಿಂದರಾಜು, ಮಲ್ಲೇಗೌಡ, ಜಬಿ ಉಲ್ಲಾ ಬೇಗ್, ಯಶೋಧ ಜೈನ್, ರೂಪ, ಸೋಮಶೇಖರ್, ಗಣೇಶ್ ಗೌಡ, ದಮ್ಮನಿಂಗಲ ಶಂಕರ್, ಹೊಸಹಳ್ಳಿ ಕೃಷ್ಣಮೂರ್ತಿ, ತುಳಸಿ ರಾಮಚಂದ್ರ, ಗಾಯಕ ಪ್ರೇಮ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಗೌರವವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ನಡೆದ ಈ ಸಮಾರಂಭವು ಕನ್ನಡಾಭಿಮಾನಿಗಳ ಗಮನ ಸೆಳೆಯಿತು.
– ಮಂಜುನಾಥ್ ಐ.ಕೆ.
