ಹಾಸನ: ಹಾಸನದ PRIDE PU & DEGREE COLLEGE ವಿದ್ಯಾರ್ಥಿ ನಾಗೇಶ್ ಎಸ್.ಡಿ. ಅವರು ಹಾಸನ ವಿಶ್ವವಿದ್ಯಾಲಯದ ಪುರುಷರ ಖೋ-ಖೋ ತಂಡಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಯಾಗಿರುವ ನಾಗೇಶ್ ಅವರು ತಮ್ಮ ಕ್ರೀಡಾ ಪ್ರತಿಭೆ, ಪರಿಶ್ರಮ ಹಾಗೂ ನಿರಂತರ ಅಭ್ಯಾಸದ ಮೂಲಕ ಈ ಸಾಧನೆ ಮಾಡಿದ್ದಾರೆ. ಇವರು 2026-27ನೇ ಸಾಲಿನ ಅಖಿಲ ಭಾರತ ಮತ್ತು ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಖೋ-ಖೋ ಪಂದ್ಯಾವಳಿಯಲ್ಲಿ ಹಾಸನ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಪ್ರೋತ್ಸಾಹ ನೀಡುತ್ತಿರುವ PRIDE ಕಾಲೇಜಿನ ಕ್ರೀಡಾ ಸಾಧನೆಗೆ ಇದು ಮತ್ತೊಂದು ಹೆಮ್ಮೆಯ ಗರಿ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ಮುಂಬರುವ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಶ್ವವಿದ್ಯಾಲಯ ಹಾಗೂ ಕಾಲೇಜಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಶುಭ ಹಾರೈಸಿದ್ದಾರೆ.
