ಶ್ಲೋಕ – 41
ಬ್ರಾಹ್ಮಣಕ್ಷತ್ರಿಯವಿಶಾಂ ಶೂದ್ರಾಣಾಂ ಚ ಪರಂತಪ ।
ಕರ್ಮಾಣಿ ಪ್ರವಿಭಕ್ತಾನಿ ಸ್ವಭಾವಪ್ರಭವೈರ್ಗುಣೈಃ ॥೪೧॥
ಬ್ರಾಹ್ಮಣ ಕ್ಷತ್ರಿಯ ವಿಶಾಮ್ ಶೂದ್ರಾಣಾಮ್ ಚ ಪರಂತಪ ।
ಕರ್ಮಾಣಿ ಪ್ರವಿಭಕ್ತಾನಿ ಸ್ವಭಾವ ಪ್ರಭವೈಃ ಗುಣೈಃ — ಓ ಅರಿಗಳ ಉರಿಯೆ, ಸ್ವಭಾವದಿಂದುಂಟಾದ ಗುಣಗಳಿಗೆ ಅನುಗುಣವಾಗಿ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ ಮತ್ತು ಶೂದ್ರರ ಕರ್ಮಗಳೂ ಬೇರೆಬೇರೆಯಾಗಿವೆ.
ಜೀವಸ್ವಭಾವಕ್ಕನುಗುಣವಾಗಿಇದು ಪೂರ್ಣವಾಗಿ ಜೀವ ಸ್ವಭಾವಕ್ಕೆ ಸಂಬಂಧಪಟ್ಟ ವಿಚಾರವಾಗಿರುವುದರಿಂದ ಇದಕ್ಕೂ ಜಾತಿಗೂ ಯಾವ ಸಂಬಂಧವೂ ಇಲ್ಲ. ಮೋಕ್ಷಯೋಗ್ಯವಾದ ಮಾನವನಲ್ಲಿ ನಾಲ್ಕು ವಿಧದ ವರ್ಣಗಳಿವೆ. ಸ್ವಭಾವಕ್ಕನುಗುಣವಾಗಿ ಪ್ರತಿಯೊಬ್ಬನ ನಡೆ-ನುಡಿ, ಆಚಾರ-ವಿಚಾರ. ಸ್ವಭಾವ ಭೇದದಿಂದಾಗಿ ಗುಣ-ಕರ್ಮ ಭೇದ. ಇದು ಪೂರ್ಣವಾಗಿ ಜೀವ ಸ್ವಭಾವಕ್ಕೆ ಸಂಬಂಧಪಟ್ಟ ವಿಚಾರವಾಗಿರುವುದರಿಂದ ಇದಕ್ಕೂ ಜಾತಿಗೂ ಯಾವ ಸಂಬಂಧವೂ ಇಲ್ಲ. ಜಾತಿ ದೇಹಕ್ಕೆ ಸಂಬಂಧಪಟ್ಟಿದ್ದು, ವರ್ಣ ಜೀವಸ್ವರೂಪಕ್ಕೆ ಸಂಬಂಧಪಟ್ಟಿದ್ದು. [ಚಾತುರ್ವರ್ಣ್ಯದ ಬಗ್ಗೆ ಹೆಚ್ಚಿನ ವಿವರಣೆಯನ್ನು ಅಧ್ಯಾಯ ೦೪-ಶ್ಲೋಕ-೧೩ ರಲ್ಲಿ ವಿವರಿಸಲಾಗಿದೆ]. ಈ ನಾಲ್ಕು ವರ್ಣದವರ ಸಹಜ ಕರ್ಮದ ವಿವರಣೆಯನ್ನು ಕೃಷ್ಣ ಮುಂದಿನ ಶ್ಲೋಕಗಳಲ್ಲಿ ವಿವರಿಸಿದ್ದಾನೆ.
