Government Employee: ಕರ್ನಾಟಕ ಸರ್ಕಾರವು ಸರ್ಕಾರಿ ನೌಕರರ ಹಾಜರಾತಿಯಲ್ಲಿ ಮಹತ್ವದ ಬದಲಾವಣೆಯನ್ನು ತರುವುದಕ್ಕೆ ಮುಂದಾಗಿದೆ. ಹೊಸ ಆದೇಶದಿಂದಾಗಿ ರಾಜ್ಯದಾದ್ಯಂತ ಸರ್ಕಾರಿ ನೌಕಕರಿಗೆ ಇ – ಹಾಜರಾತಿ ಸಿಗಲಿದೆ. ಪಂಚತಂತ್ರ 2.0 ಮೊಬೈಲ್ ಆಯಪ್ ಮೂಲಕ ಇ-ಹಾಜರಾತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ.
ಅಲ್ಲದೇ ಸರ್ಕಾರಿ ನೌಕರರ ವೇತನವನ್ನು ಬಯೋಮೆಟ್ರಿಕ್ ಆಧಾರದ ಮೇಲೆ ಪಾವತಿ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಹಾಜರಾತಿಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ ಕೊಟ್ಟಿದೆ. ಈ ಸಂಬಂಧ ಆದೇಶವೊಂದನ್ನು ಮಾಡಲಾಗಿದ್ದು ಪಂಚತಂತ್ರ 2.0 ಮೊಬೈಲ್ ಆಯಪ್ ಬಳಸುವುದಕ್ಕೆ ಮುಂದಾಗಿದೆ. ಅದೇನು ಎನ್ನುವ ವಿವರ ನೋಡೋಣ.
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ವೊಂದನ್ನು ಕೊಟ್ಟಿದೆ. ಪಂಚತಂತ್ರ 2.0 ಮೊಬೈಲ್ ಆಯಪ್ ಬಳಸಿಕೊಂಡು ಇ-ಹಾಜರಾತಿಯನ್ನು ದಾಖಲಿಸುವುದಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಸರ್ಕಾರವು ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರ ಕಾರ್ಯವೈಖರಿ ಹಾಗೂ ಕೆಲಸವನ್ನು ಗಂಭೀರವಾಗಿ ಪರಿಗಣಿಸಿದೆ. ಸರ್ಕಾರಿ ನೌಕರರ ಕೆಲಸದ ಮೇಲೆ ಕಣ್ಣಿಡುವ ಉದ್ದೇಶದಿಂದ ಎಐ ತಂತ್ರಜ್ಞಾನವನ್ನೂ ಬಳಸಲಾಗುತ್ತಿದೆ.
ಇದೀಗ ಕರ್ನಾಟಕದ ಎಲ್ಲಾ ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗಳು (ಟ್ಯಾಕ್ಸ್ ಕಲೆಕ್ಟ್ ಮಾಡುವವರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್/ ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ವಾಟರ್ಮ್ಯಾನ್) ಪ್ರತಿದಿನ ಪಂಚತಂತ್ರ 2.0 ತಂತ್ರಾಂಶದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್- ಹಾಜರಾತಿಯನ್ನು ದಾಖಲಿಸುವಂತೆ ಹಾಗೂ ಪ್ರತಿ ತಿಂಗಳ ವೇತನವನ್ನು ಬಯೋಮೆಟ್ರಿಕ್ ಹಾಜರಾತಿಯ ಆಧಾರದ ಮೇಲೆ ಪಾವತಿಸುವಂತೆ ಆದೇಶದಲ್ಲಿ ವಿವರಿಸಲಾಗಿದೆ.
ಮುಂದುವರಿದು, ಟ್ಯಾಕ್ಸ್ ಕಲೆಕ್ಟ್ ಮಾಡುವವರು, ಸ್ವಚ್ಛತಾ ಸಿಬ್ಬಂದಿ ಮತ್ತು ವಾಟರ್ ಮ್ಯಾನ್ಗಳ ಕೆಲಸವು ಕ್ಷೇತ್ರದಲ್ಲಿರುವುದರಿಂದ, ಇವರು ನಿಗದಿತ ಸಮಯದೊಳಗೆ ಕಚೇರಿಗೆ ಹಾಜರಾಗಿ ಪಂಚತಂತ್ರ 2.0 ತಂತ್ರಾಂಶದಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ದಾಖಲಿಸುವುದು ಸಾಧ್ಯವಾಗದೆ ಇರುವುದರಿಂದ ಈ ಸಿಬ್ಬಂದಿಗಳಿಗೆ ಪಂಚತಂತ್ರ 2.0 ತಂತ್ರಾಂಶದಲ್ಲಿ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲು ಸರ್ಕಾರವು ನಿರ್ಧರಿಸಿದೆ.
ಅದರಂತೆ, ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕರವಸೂಲಿಗಾರರು, ಸ್ವಚ್ಛತಾಗಾರರು ಮತ್ತು ನೀರುಗಂಟಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಿದ್ದು. ಇವರಿಗೆ ಪಂಚತಂತ್ರ 2.0 ಮೊಬೈಲ್ ಆಯಪ್ನ ಮೂಲಕ ಇ-ಹಾಜರಾತಿಯನ್ನು ದಾಖಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಅದರಂತೆ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಲು ಹಾಗೂ ಮುಂದುವರಿದು ವೇತನವನ್ನು ಕಡ್ಡಾಯವಾಗಿ ಇ-ಹಾಜರಾತಿಯ ಆಧಾರದ ಮೇಲೆ ಪಾವತಿಸಲು ಕ್ರಮ ವಹಿಸುವಂತೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ಕಾರ್ಯಗತಗೊಳಿಸಲು ಸರ್ಕಾರಿ ಆದೇಶ ಮಾಡಲಾಗಿದೆ.
ಇನ್ನು ಈ ನೂತನ ಆದೇಶವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅನುಮೋದನೆ ನೀಡಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.
