ಚೆನ್ನೈ: ಲೋಕಸಭೆ ಅಂಗೀಕರಿಸಿರುವ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಹೇಳಿದೆ.
ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೇರಿದಂತೆ ಡಿಎಂಕೆ ಶಾಸಕರು ಕಪ್ಪುಪಟ್ಟಿ ಧರಿಸಿ ಗುರುವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಸದನವನ್ನುದ್ದೇಶಿಸಿ ಮಾತನಾಡಿದ ಸ್ಟಾಲಿನ್, ‘ವಕ್ಫ್ ಆಸ್ತಿ ವಿಚಾರವಾಗಿ ಡಿಎಂಕೆ ಹೋರಾಡಲಿದ್ದು, ಜಯಶಾಲಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
