ಬೆಂಗಳೂರು– ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ಮಾ.01,2025 ರಿಂದ 20,2025 ರವರೆಗೆ ನಡೆಸಲಾಗಿತ್ತು, ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು,. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಏ. 08,2025 ರಂದು ಮಧ್ಯಾಹ್ನ 12:30 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಾಗಿದೆ.
ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಏ.8ರ ಮಧ್ಯಾಹ್ನ 1:30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
