ಚಾಮರಾಜನಗರ:– ನಗರದ ಜಿಲ್ಲಾಸ್ಪತ್ರೆಯಲ್ಲಿ ನೂತನವಾಗಿ ತೆರೆದಿರುವ ಸರ್ಜಿಕಲ್ ಯೂನಿಟ್ ಅಥವಾ ತುರ್ತು ಚಿಕಿತ್ಸಾ ಘಟಕಕ್ಕೆ ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಿಮ್ಸ್ ನ ಡೀನ್ ಮತ್ತು ನಿರ್ದೇಶಕ ಡಾ.ಮಂಜುನಾಥ್ ಮಾತನಾಡಿ, ಗರ್ಭಿಣಿ ಮಹಿಳೆಯರು ಹೆರಿಗೆ ಸಂದರ್ಭದಲ್ಲಿ ಅನುಭವಿಸುತ್ತಿದ್ದ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ತುರ್ತು ಚಿಕಿತ್ಸಾ ಘಟಕ ಅತ್ಯಂತ ಅಗತ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆ ಮತ್ತು ಮಕ್ಕಳ ವಿಭಾಗ ಕಾರ್ಯನಿರ್ವಹಿಸುತ್ತಿದ್ದು, ತಿಂಗಳಿಗೆ ಅಂದಾಜು 300 ರಷ್ಟು ಹೆರಿಗೆಯಾಗುತ್ತದೆ. ಹೆರಿಗೆಯ ಸಮಯದಲ್ಲಿ ಮಹಿಳೆಯರಿಗೆ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಾಗ ಅವರಿಗೆ ಅಗತ್ಯ ಚಿಕಿತ್ಸೆಯನ್ನು ನೀಡುವ ಸೌಲಭ್ಯ ಇರಲಿಲ್ಲ. ಈ ತುರ್ತು ಘಟಕವನ್ನು ಪ್ರಾರಂಭಿಸುವುದರಿಂದ ಅಂತಹ ಮಹಿಳೆಯರಿಗೆ ಇಲ್ಲೆಯೇ ಚಿಕಿತ್ಸೆ ನೀಡಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಿಮ್ಸ್ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಅದರಲ್ಲೂ ಹೊರರಾಜ್ಯ ತಾಳವಾಡಿಯಿಂದಲೂ ಹೆರಿಗೆಗೆ ಬರುತ್ತಿದ್ದಾರೆ. ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 20 ಹಾಸಿಗೆಗಳ ಸುಸಜ್ಜಿತವಾದ ತುರ್ತು ಘಟಕವನ್ನು ಪ್ರಾರಂಭಿಸಲಾಗಿದೆ. ಈ ಭಾಗದ ಮಹಿಳೆಯರಿಗೆ ಇದು ಅತ್ಯಂತ ಸಹಕಾರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿಮ್ಸ್ ಸ್ಥಾನಿಕ ವೈದ್ಯಾಧಿಕಾರಿ ಡಾ.ಮಹೇಶ್, ಕೀಲು ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ.ಮಾರುತಿ, ಹೆರಿಗೆ ವಿಭಾಗದ ಮುಖ್ಯಸ್ಥ ಡಾ.ಎಂ.ಆರ್.ಪ್ರದೀಪ್, ಜಿಲ್ಲಾ ಶಸ ಚಿಕಿತ್ಸಕ ಡಾ.ಮಹೇಶ್ ಹಾಗೂ ಇತರರು ಹಾಜರಿದ್ದರು.

ವರದಿ: ಶ್ರೀ ಸಾಯಿ ಎಸ್ ಮಂಜು

[…] 14. https://vicharavisthara.com/chamarajanagar-emergency-care-unit-is-very-necessary-sims-dean-dr-manju… ಚಾಮರಾಜನಗರ-ತುರ್ತು ಚಿಕಿತ್ಸಾ ಘಟಕ ಅತ್ಯಂತ ಅಗತ್ಯವಾಗಿದೆ:ಸಿಮ್ಸ್ ಡೀನ್ ಡಾ.ಮಂಜುನಾಥ್ […]