ಹಾಸನ: ನಿನ್ನೆ ಪ್ರಕಟವಾದ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 79 ಅಂಕ ಬಂದಿದ್ದರೂ ಕಡಿಮೆ ಎಂದು ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹ*ತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ.
ಇಲ್ಲಿನ ಶಿಕ್ಷಕ ಪ್ರಕಾಶ್ ಅವರ ಪುತ್ರ 18 ವರ್ಷದ ಮನೋಜ್ ಆತ್ಮಹ*ತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಫಲಿತಾಂಶ ನೋಡಿ ಬಂದ ಮನೋಜ್ ನಿನ್ನೆ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಮನೋಜ್ ಅರಸೀಕೆರೆ ನಗರದ ಅನಂತ ಪಿಯು ಕಾಲೇಜಿನಲ್ಲಿ ಪಿಸಿಎಂಬಿ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದ.
