1.ಜಾತಿ ಗಣತಿ ವರದಿ ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕ ವರದಿ ರೂಪಿಸಿ: ಅಶೋಕ್ ಆಗ್ರಹ
ಬಿಜೆಪಿ ನಾಯಕ ಆರ್. ಅಶೋಕ್ ಅವರು ಕರ್ನಾಟಕದ ಜಾತಿ ಗಣತಿ ವರದಿಯನ್ನು ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಮತಗಳನ್ನು ಗಳಿಸಲು ಈ ವರದಿಯನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವರದಿ ಅವೈಜ್ಞಾನಿಕವಾಗಿದ್ದು, ಪುನರ್ ಪರಿಶೀಲನೆ ಅಗತ್ಯ ಎಂದು ಅವರು ಆಗ್ರಹಿಸಿದ್ದಾರೆ. ಲಿಂಗಾಯತ, ಒಕ್ಕಲಿಗ ಮತ್ತು ದಲಿತ ಸಮುದಾಯಗಳ ನಿರ್ಲಕ್ಷ್ಯವನ್ನು ಅವರು ಪ್ರಶ್ನಿಸಿದ್ದಾರೆ.

2.ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶೀ ಶಿವಕುಮಾರ ಸ್ವಾಮೀಜಿಯವರ ಹೆಸರು ಇಡಬೇಕು ಎಂಬುವುದು ತುಮಕೂರು ಜನರ ಬಹುದಿನಗಳ ಒತ್ತಾಯವಾಗಿದೆ. ಇದಕ್ಕೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ರೈಲ್ವೇ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

3.ಏರುತ್ತಲೇ ಇದೆ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯ ವೆಚ್ಚ: ಕೇಂದ್ರದ ನಿರ್ಧಾರದತ್ತ ಎಲ್ಲರ ಚಿತ್ತ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ನೈರುತ್ಯ ರೈಲ್ವೆಯು 17,147 ಕೋಟಿ ರೂ. ವೆಚ್ಚದ ಪರಿಷ್ಕೃತ ವಿಸ್ತ್ರತ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಿದೆ. ಮೊದಲು ಅಂದಾಜಿಸಿದ್ದಕ್ಕಿಂತ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆ. ಈ ಯೋಜನೆಯಿಂದ ಪಶ್ಚಿಮ ಘಟ್ಟದ ಪರಿಸರ ಮತ್ತು ವನ್ಯಜೀವಿಗಳಿಗೆ ಅಪಾಯವಿದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

4.ಮೊಬೈಲ್, ಕಂಪ್ಯೂಟರ್ಗಳಿಗೆ ಸುಂಕದಿಂದ ವಿನಾಯಿತಿ ಘೋಷಿಸಿದ ಡೊನಾಲ್ಡ್ ಟ್ರಂಪ್
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಮಾರ್ಟ್ಫೋನ್ಗಳು, ಕಂಪ್ಯೂಟರ್ಗಳು ಮತ್ತು ಚಿಪ್ಗಳು, ತಾಂತ್ರಿಕ ಉತ್ಪನ್ನಗಳಿಗೆ ಸುಂಕಗಳಿಂದ ವಿನಾಯಿತಿ ನೀಡಿದ್ದಾರೆ. ಚೀನಾದ ಸರಕುಗಳ ಮೇಲೆ ಶೇ. 145ರಷ್ಟು ಸುಂಕ ಮತ್ತು ಇತರೆ ದೇಶಗಳ ಉತ್ಪನ್ನಗಳ ಮೇಲೆ ಶೇ. 10ರಷ್ಟು ಮೂಲ ಸುಂಕ ವಿಧಿಸುವುದಾಗಿ ಟ್ರಂಪ್ ಘೋಷಿಸಿದ್ದರು. ಈ ವಾರದ ಆರಂಭದಲ್ಲಿ ಶ್ವೇತಭವನವು ಚೀನಾವನ್ನು ಹೊರತುಪಡಿಸಿ ಹೆಚ್ಚಿನ ದೇಶಗಳಿಗೆ ಸುಂಕಗಳ ಮೇಲೆ 90 ದಿನಗಳ ವಿರಾಮವನ್ನು ಘೋಷಿಸಿತ್ತು.

5.ಭ್ರಷ್ಟಾಚಾರ ಪ್ರಕರಣ; ಶೇಖ್ ಹಸೀನಾ, ಮಗಳ ವಿರುದ್ಧ ಬಾಂಗ್ಲಾದೇಶ ನ್ಯಾಯಾಲಯದಿಂದ ಬಂಧನ ವಾರಂಟ್ ಜಾರಿ
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ನ್ಯಾಯಾಲಯವು ಬಾಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ಪುತ್ರಿಯ ವಿರುದ್ಧ ಹೊಸ ಬಂಧನ ವಾರಂಟ್ ಹೊರಡಿಸಿದೆ. ಶೇಖ್ ಹಸೀನಾ ಮತ್ತು ಅವರ ಮಗಳು ಮಾತ್ರವಲ್ಲದೆ ಒಟ್ಟು 18 ಜನರ ವಿರುದ್ಧ ಬಂಧನ ವಾರೆಂಟ್ ಹೊರಡಿಸಲಾಗಿದೆ.

