ಬೆಂಗಳೂರು: 500ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಅಭಿನಯ ಮಾಡಿದ್ದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಅವರು (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಅವರು 1991 ರಿಂದ ಕನ್ನಡ ಸಿನಿಮಾಗಳಲ್ಲಿ ಸಕ್ರಿಯರಾದರು. ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಜೀ ಬೂಂಬಾ, ಕೌರವ ಸೇರಿದಂತೆ 500ಕ್ಕೂ ಅಧಿಕ ಸಿನಿಮಾಗಳಲ್ಲಿ ಜನಾರ್ಧನ್ ನಟಿಸಿದ್ದಾರೆ. ಹಿರಿತೆರೆ, ಕಿರುತೆರೆಯಲ್ಲೂ ಜನಾರ್ಧನ್ ಕೆಲಸ ಮಾಡಿದ್ದಾರೆ. ಪಾಪ ಪಾಂಡು, ಜೋಕಾಲಿ, ರೋಬೋ ಫ್ಯಾಮಿಲಿ, ಮಾಂಗಲ್ಯ ಧಾರಾವಾಹಿಗಳಲ್ಲಿಯೂ ನಟಿಸಿದ್ದರು.
