1.ಜಾತಿಗಣತಿ ಜಟಾಪಟಿ: ನಾಳೆ ಒಕ್ಕಲಿಗ ಶಾಸಕರ ಸಭೆ ಕರೆದ ಡಿಕೆ ಶಿವಕುಮಾರ್, ಸಂಚಲನ ಮೂಡಿಸಿದ ಡಿಸಿಎಂ ನಡೆ

ಜಾತಿಗಣತಿ ವರದಿಯಲ್ಲಿ ಅನ್ಯಾಯವಾಗಿದೆ ಎಂದು ಅಸಮಾಧಾನ ಹಿನ್ನೆಲೆ, ಡಿಸಿಎಂ ಡಿಕೆ ಶಿವಕುಮಾರ್ ನಾಳೆ ಒಕ್ಕಲಿಗ ಶಾಸಕರ ಸಭೆ ಕೆರದಿದ್ದಾರೆ. ಡಿಕೆ ಶಿವಕುಮಾರ್ ನಿವಾಸದಲ್ಲಿ ಮೀಟಿಂಗ್ ನಡೆಯಲಿದ್ದು, ವರದಿ ಬಗ್ಗೆ ಸಾಧಕ, ಬಾಧಕಗಳನ್ನ ಚರ್ಚಿಸಲಾಗುತ್ತೆ. ಸದ್ಯ ಡಿಕೆ ಶಿವಕುಮಾರ್ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
***
2.Karnataka Lorry Strike: ಕರ್ನಾಟಕ ಲಾರಿ ಮುಷ್ಕರ ಶುರು; ಲಾರಿ, ಟ್ರಕ್ ಸಂಚಾರ ಸ್ಥಗಿತ

ಕರ್ನಾಟಕ ಲಾರಿ ಮುಷ್ಕರ: ಡಿಸೇಲ್ ದರ ಏರಿಕೆ ಖಂಡಿಸಿ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಕರೆ ನೀಡಿರುವ ಕರ್ನಾಟಕ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ. ಬೆಂಗಳೂರು, ಮೈಸೂರು ಸೇರಿದಂತೆ ಅನೇಕ ಕಡೆಗಳಲ್ಲಿ ಲಾರಿಗಳ ಹಾಗೂ ಟ್ರಕ್ಗಳ ಸಂಚಾರ ಸ್ಥಗಿತಗೊಂಡಿದೆ.
*****
3.ಪಶ್ಚಿಮ ಬಂಗಾಳ: ವಕ್ಫ್ ಕಾಯ್ದೆ ವಿರೋಧಿಸಿ ಪ್ರತಿಭಟನೆ, ಪೊಲೀಸರೊಂದಿಗೆ ISF ಬೆಂಬಲಿಗರ ಘರ್ಷಣೆ, ಹಲವರಿಗೆ ಗಾಯ, ವಾಹನಗಳಿಗೆ ಬೆಂಕಿ!

ಕೊಲ್ಕತಾ: ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾಂಗೋರ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಇಂಡಿಯನ್ ಸೆಕ್ಯೂಲರ್ ಫ್ರಾಂಟ್ (ISF) ಬೆಂಬಲಿಗರು ಮತ್ತು ಪೊಲೀಸರೊಂದಿಗೆ ಸೋಮವಾರ ಘರ್ಷಣೆ ನಡೆದಿದೆ.
ಪಕ್ಷದ ನಾಯಕ ಮತ್ತು ಭಂಗಾರ್ ಶಾಸಕ ನೌಶಾದ್ ಸಿದ್ದಿಕ್ ಮಾತನಾಡುತ್ತಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಲು ಮಧ್ಯ ಕೋಲ್ಕತ್ತಾದ ರಾಮ್ಲೀಲಾ ಮೈದಾನಕ್ಕೆ ತೆರಳುತ್ತಿದ್ದ ಐಎಸ್ಎಫ್ ಬೆಂಬಲಿಗರನ್ನು ಪೊಲೀಸರು ತಡೆದಿದ್ದರಿಂದ ಘರ್ಷಣೆ ಭುಗಿಲೆದ್ದಿದೆ. ಬಸಂತಿ ಹೆದ್ದಾರಿಯ ಭೋಜೆರ್ಹತ್ ಬಳಿ ಪ್ರತಿಭಟನಾಕಾರರನ್ನು ತಡೆದು ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಗುಂಪು ಪೊಲೀಸ್ ಬ್ಯಾರಿಕೇಡ್ಗಳನ್ನು ಭೇದಿಸಲು ಯತ್ನಿಸಿದಾಗ ಉದ್ವಿಗ್ನತೆ ಉಂಟಾಯಿತು, ಇದು ಎರಡು ಕಡೆಯ ನಡುವೆ ಘರ್ಷಣೆಗೆ ಕಾರಣವಾಗಿದೆ.
****
4.ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ವಿಧಿವಶ: ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ | S K Shyamasunder

S K Shyamasunder : ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರು ಸೋಮವಾರ (ಏಪ್ರಿಲ್ 14) ರಾತ್ರಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದು, ಕನ್ನಡ ಪತ್ರಿಕೋದ್ಯಮದ ಮತ್ತೊಂದು ಕೊಂಡಿ ಕಳಚಿಕೊಂಡಿದೆ.
ಶ್ಯಾಮಸುಂದರ್ ಅವರು ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಆರೋಗ್ಯ ಚೇತರಿಸದೇ ಕೋಮಾಗೆ ಜಾರಿದ್ದರು. ನಿರಂತರವಾಗಿ ಚಿಕಿತ್ಸೆ ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಸೋಮರಾತ್ರಿ ಹೃದಯಾಘಾತದಿಂದ ಶಾಶ್ವತವಾಗಿ ಕಣ್ಮುಚ್ಚಿದ್ದಾರೆ. ಶ್ಯಾಮಸುಂದರ್ ಅವರಿಗೆ 72 ವರ್ಷ ವಯಸ್ಸಾಗಿತ್ತು.
*******
5.ರಾಜ್ಯದಲ್ಲಿ ಗುರುತಿಸದ 398 ಜಾತಿಗಳು ಪತ್ತೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗವು ರಾಜ್ಯದಲ್ಲಿ 2015ರಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಈವರೆಗೂ ಗುರುತಿಸದ 398 ಹೊಸ ಜಾತಿಗಳು ಪತ್ತೆ ಆಗಿವೆ.
ಅಲ್ಲದೆ, ಸಮೀಕ್ಷೆಯ ಸಂದರ್ಭದಲ್ಲಿ 2,53,954 ಜನರು ತಮ್ಮ ಜಾತಿಯನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. 1,34,319 ಜನರು ತಾವು ಯಾವುದೇ ಜಾತಿಗೆ ಸೇರಿದವರಲ್ಲ ಎಂದು ಹೇಳಿಕೊಂಡಿದ್ದಾರೆ.
ಎಚ್. ಕಾಂತರಾಜ ಅವರು ಅಧ್ಯಕ್ಷರಾಗಿದ್ದಾಗ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಈ ಸಮೀಕ್ಷೆಯ ದತ್ತಾಂಶಗಳನ್ನು ಅಧ್ಯಯನ ಮಾಡಿ ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಈ ಮಾಹಿತಿಯಿದೆ.

