1ಅಮೆರಿಕ ಜೊತೆ ನಮ್ಮ ಸಹಭಾಗಿತ್ವ ಮುನ್ನಡೆಸಲು ಭಾರತ ಬದ್ಧ’: ಎಲಾನ್ ಮಸ್ಕ್ ಜೊತೆ ಪ್ರಧಾನಿ ಮೋದಿ ಸಂಭಾಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ಸಲಹೆಗಾರ, ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ.
ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸೇರಿದಂತೆ ಮಸ್ಕ್ ಅವರ ವ್ಯವಹಾರ ಕಂಪೆನಿಗಳ ಬಗ್ಗೆ ಮಾತುಕತೆ ನಡೆಸಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
****
2.ಸುಪ್ರೀಂ ತೀರ್ಪು ‘ಪ್ರಜಾಪ್ರಭುತ್ವ ವಿರೋಧಿ ಶಕ್ತಿ’ಗಳನ್ನು ಬೆಚ್ಚಿಬೀಳಿಸಿದೆ: ಧನಕರ್ ವಿರುದ್ಧ ಸ್ಟಾಲಿನ್ ವಾಗ್ದಾಳಿ

ಚೆನ್ನೈ: ರಾಜ್ಯಪಾಲರ ಕುರಿತ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಸ್ವಾಗತಾರ್ಹ, ಆದರೆ ಈ ತೀರ್ಪು “ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳನ್ನು” ಬೆಚ್ಚಿಬೀಳಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಶುಕ್ರವಾರ ಹೇಳಿದ್ದಾರೆ.
ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಟೀಕಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹೆಸರನ್ನು ನೇರವಾಗಿ ಪ್ರಸ್ತಾಪಿಸದೆ ತಮಿಳುನಾಡು ಮುಖ್ಯಮಂತ್ರಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
*****
3.ಪಂಜಾಬ್ನಾದ್ಯಂತ 14 ಗ್ರೆನೇಡ್ ದಾಳಿ ಪ್ರಕರಣ: ಮಾಸ್ಟರ್ ಮೈಂಡ್, ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿ ಅಮೆರಿಕದಲ್ಲಿ ಎಫ್ಬಿಐ ಬಲೆಗೆ

ಪಂಜಾಬ್ನಾದ್ಯಂತ ನಡೆದ 14 ಗ್ರೆನೇಡ್ ದಾಳಿಗಳ ಪ್ರಮುಖ ಆರೋಪಿ ಮತ್ತು ಖಲಿಸ್ತಾನಿ ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನನ್ನು ಅಮೆರಿಕದಲ್ಲಿ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಬಂಧಿಸಿದೆ.
ಪಾಸಿಯಾ ಎಂಬಾತನನ್ನು ಶುಕ್ರವಾರ ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿ ಎಫ್ಬಿಐ ಮತ್ತು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿಯ ಜಾರಿ ಮತ್ತು ತೆಗೆಯುವ ಕಾರ್ಯಾಚರಣೆಗಳು (ಇಆರ್ಒ) ಬಂಧಿಸಿವೆ ಎಂದು ಮೂಲಗಳು ಖಚಿತಪಡಿಸಿವೆ.
****
4.ಜಾತಿ ಗಣತಿ ವರದಿ: ತಪ್ಪು ಹೆಜ್ಜೆ ಇಟ್ಟರೆ ಅಪಾಯ ಕಟ್ಟಿಟ್ಟ ಬುತ್ತಿ; ಸತೀಶ್ ಜಾರಕಿಹೊಳಿ ಎಚ್ಚರಿಕೆ

ಬೆಂಗಳೂರು: ವಿವಾದಿತ ಜಾತಿ ಗಣತಿ ವರದಿ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧತೆ ಕಡಿಮೆ ಮತ್ತು ಹಲವು ಸಂಕೀರ್ಣತೆಗಳಿಂದಾಗಿ ನಿರ್ಧಾರ ಕೈಗೊಳ್ಳಲು ಒಂದು ವರ್ಷ ಸಮಯ ತೆಗೆದುಕೊಳ್ಳಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.
ಜಾತಿ ಗಣತಿ ವರದಿಯ ಕುರಿತು ವಿವಿಧ ಜಾತಿಗಳು ಎತ್ತಿರುವ ಕಳವಳಗಳನ್ನು ಪರಿಹರಿಸುವಲ್ಲಿ ಯಾವುದೇ ತಪ್ಪು ಹೆಜ್ಜೆ ಇಟ್ಟರೆ ಭವಿಷ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸಚಿವರು ಎಚ್ಚರಿಸಿದ್ದಾರೆ.
****
5.ಮಂಗಳೂರಿನಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ; 1 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ಭಾಗಿ

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ 2025 ಅನ್ನು ವಿರೋಧಿಸಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಈ ಪ್ರತಿಭಟನೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮುಸ್ಲಿಮರು ಭಾಗವಹಿಸಿದ್ದರು.
ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದಿಂದ ನಡೆದ ಅತಿದೊಡ್ಡ ಪ್ರತಿಭಟನೆ ಇದಾಗಿದ್ದು, ಮಂಗಳೂರಿನ ಉಲೇಮಾ ಸಮನ್ವಯ ಸಮಿತಿ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮತ್ತು ಇತರ ಹಲವಾರು ಮುಸ್ಲಿಂ ಸಂಘಟನೆಗಳು ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದವು.
****

[…] ಮಾರ್ನಿಂಗ್ ಟೈಮ್ ಕ್ವಿಕ್ ನ್ಯೂಸ್ […]