ಪಾಕಿಸ್ತಾನ : ಪಾಕಿಸ್ತಾನದ ವಾಯುಪ್ರದೇಶದಲ್ಲಿ ಭಾರತೀಯ ವಿಮಾನಗಳು ಹಾರಾಟ ನಡೆಸುವುದನ್ನು ನಿಷೇಧಿಸಲಾಗಿದ್ದು, ಮುಂದಿನ 48 ಗಂಟೆಗಳಲ್ಲಿ ದೇಶದಲ್ಲಿರುವ ಎಲ್ಲಾ ಭಾರತೀಯರು ದೇಶ ಬಿಟ್ಟು ತೆರಳುವಂತೆ ಪಾಕ್ ಆದೇಶಿಸಿದೆ. ಇದಲ್ಲದೆ, ಭಾರತದೊಂದಿಗಿನ ಎಲ್ಲಾ ವ್ಯಾಪಾರವನ್ನು ನಿಷೇಧಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಸರ್ಕಾರ ಪ್ರತಿಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈ ಘೋಷಣೆ ಹೊರಡಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 27 ಪ್ರವಾಸಿಗರ ಸಾವು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಏಪ್ರಿಲ್ 22, 2025 ರಂದು ಭಯೋತ್ಪಾದಕರು ಅನಿರೀಕ್ಷಿತ ದಾಳಿ ನಡೆಸಿದರು. ಈ ಕ್ರೂರ ದಾಳಿಯಲ್ಲಿ ಇಬ್ಬರು ವಿದೇಶಿ ಪ್ರವಾಸಿಗರು ಸೇರಿದಂತೆ 27 ಜನ ಸಾವನ್ನಪ್ಪಿದರು. ಈ ದಾಳಿಯ ಹೊಣೆಯನ್ನು ಪಾಕಿಸ್ತಾನಿ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ ಹೊಣೆಯನ್ನು ಹೊತ್ತುಕೊಂಡಿದೆ. ಇದರಿಂದಾಗಿ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೆ, ಅತ್ತ ಪಾಕ್ ಸಹ ಭಾರತದ ವಿರುದ್ಧ ಪ್ರತೀಕಾರದ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದೆ.
ಭಾರತದ ವಿರುದ್ಧ ಪಾಕ್ ಪ್ರತೀಕಾರದ ಕ್ರಮ : ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಮುಂದುವರಿಸುತ್ತಿದ್ದಂತೆ, ಪಾಕ್ ಸರ್ಕಾರವು ಪ್ರತಿಕ್ರಿಯೆಯಾಗಿ ಭಾರತದ ಮೇಲೆ ಪರಿಣಾಮ ಬೀರಬಹುದಾದ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.. ಅವುಗಳು ಈ ಕೆಳಗಿನಂತಿವೆ.
ಪಾಕಿಸ್ತಾನ ಸರ್ಕಾರ ಭಾರತದೊಂದಿಗಿನ ಎಲ್ಲಾ ವ್ಯಾಪಾರವನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.
ಪಾಕಿಸ್ತಾನ ಸರ್ಕಾರ ಭಾರತೀಯ ವಿಮಾನಗಳು ತನ್ನ ವಾಯುಪ್ರದೇಶವನ್ನು ಬಳಸುವುದನ್ನು ನಿಷೇಧಿಸಿದೆ.
ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಧಿಕಾರಿಗಳ ಸಂಖ್ಯೆಯನ್ನು 30ಕ್ಕೆ ಇಳಿಸಲು ನಿರ್ಧರಿಸಿದೆ.
ಪಾಕಿಸ್ತಾನ ಸರ್ಕಾರವು ಸಾರ್ಕ್ ದೇಶಗಳಿಂದ ಭಾರತಕ್ಕೆ ವೀಸಾ ನೀಡುವುದನ್ನು ನಿಲ್ಲಿಸಲು ನಿರ್ಧರಿಸಿದೆ.
ಮುಂದಿನ 48 ಗಂಟೆಗಳಲ್ಲಿ ಪಾಕಿಸ್ತಾನದಲ್ಲಿರುವ ಭಾರತೀಯರು ದೇಶ ತೊರೆಯಬೇಕು ಎಂದು ಘೋಷಿಸಿದೆ.
