ಬೆಂಗಳೂರು, ಏಪ್ರಿಲ್ 25: ಇಸ್ರೋ ಮಾಜಿ ಅಧ್ಯಕ್ಷ, ಪದ್ಮಶ್ರೀ ಕೆ.ಕಸ್ತೂರಿರಂಗನ್ (K.Kasturirangan) (84) ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೆ.ಕಸ್ತೂರಿರಂಗನ್ ಅವರು ಕೊನೆಯುಸಿರು ಎಳೆದಿದ್ದಾರೆ.
ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು 1994ರಿಂದ 2003ರವರೆಗೆ ಇಸ್ರೋ ಅಧ್ಯಕ್ಷರಾಗಿದ್ದರು. ಕೆ. ಕೃಷ್ಣಸ್ವಾಮಿ ಅವರು ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
ಕೆ. ಕೃಷ್ಣಸ್ವಾಮಿ ಅವರು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದರು. ಇವರು ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಅದ್ಭುತವಾದ ಸಾಧನೆಗಳನ್ನು ಮಾಡಿದ್ದರು.
ಡಾ. ಕಸ್ತೂರಿರಂಗನ್ ಅವರು ಬಾಂಬೆ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು. 1971 ರಲ್ಲಿ ಅಹಮದಾಬಾದ್ನಲ್ಲಿ ಖಗೋಳಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದರು.
