ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳು ಈಗಾಗಲೇ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಇನ್ನೇನು ಸಿಇಟಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಸಿಇಟಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಕೆಇಎ ಹೊಸ ನಿಮಯ ಜಾರಿಗೆ ತಂದಿದೆ. ಈ ನಿಯಮ ಪಾಲಿಸದಿದ್ದರೆ ವಿದ್ಯಾರ್ಥಿಗಳಿಗೆ ಸಂಕಷ್ಟ ಕಟ್ಟಿಟ್ಟಬುತ್ತಿ.

*****
ಹಿಂದೂ ಧರ್ಮದ ರಕ್ಷಣೆಗೆ ಸಂತರು, ಶರಣರು ಒಂದಾಗಿ: ಭಾರತೀಯ ಸಂತ ಪರಿಷತ್

ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಭಯೋತ್ಪಾದಕರ ಅಟ್ಟಹಾಸ ಬೆನ್ನಲ್ಲೇ ಬೆಳಗಾವಿಯಲ್ಲಿ ಭಾರತೀಯ ಸಂತ ಪರಿಷತ್ತಿನ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಅಯೋಧ್ಯ ಗೋವಿಂದ ಗಿರಿ ಮಹಾರಾಜರು ಹಿಂದೂಗಳಿಗೆ ಬಟೆಂಗೆ ತೋ ಕಟೆಂಗೆ ಎಂಬ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಅಷ್ಟೇ ಅಲ್ಲದೇ ಹಿಂದೂಗಳು ಒಂದಾಗುವಂತೆ ಕೂಡ ಕರೆ ಕೊಟ್ಟಿದ್ದಾರೆ.
******
ರೈಲ್ವೆ ಇಲಾಖೆಯು 10 ವರ್ಷಗಳಲ್ಲಿ 5 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೀಡಿದೆ: ಸೋಮಣ್ಣ

ಭಾರತೀಯ ರೈಲ್ವೆ ಇಲಾಖೆಯು ತನ್ನ ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿ 2014 ರಿಂದ 2024 ರವರೆಗೆ 5.02 ಲಕ್ಷಕ್ಕೂ ಹೆಚ್ಚು ಯುವಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿದೆ. 2024ರ ಜನವರಿಯಿಂದ 71,000 ಹುದ್ದೆಗಳ ಸೃಷ್ಟಿಯಾಗಿದ್ದು, ನೇಮಕಾತಿ ಪ್ರಕ್ರಿಯೆ ಮುಂದುವರಿಯುತ್ತಿದೆ. ಇದಲ್ಲದೆ, ಪ್ರಧಾನಮಂತ್ರಿಗಳ ಉದ್ಯೋಗ ಸೃಷ್ಟಿ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದೆ. ಸರ್ಕಾರವು ಯುವಜನರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ತಿಳಿಸಿದರು.
******
ದೌರ್ಜನ್ಯ ನಡೆಸುವವರನ್ನು ಕೊಲ್ಲುವುದು ಕೂಡ ಧರ್ಮ; ಪಹಲ್ಗಾಮ್ ದಾಳಿ ಕುರಿತು ಮೋಹನ್ ಭಾಗವತ್ ಪ್ರತಿಕ್ರಿಯೆ

ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಂದು ದೆಹಲಿಯಲ್ಲಿ ‘ದಿ ಹಿಂದೂ ಪ್ರಣಾಳಿಕೆ’ಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆ ಅವರು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆಯೂ ಮಾತನಾಡಿದ್ದಾರೆ. ‘ದೌರ್ಜನ್ಯ ಎಸಗುವವರಿಗೆ ಪಾಠ ಕಲಿಸುವುದು ನಮ್ಮ ಕರ್ತವ್ಯ. ಮೊದಲನೆಯದಾಗಿ ನಾವು ನಮ್ಮ ನೆರೆಹೊರೆಯವರಿಗೆ ಹಾನಿ ಮಾಡುವುದಿಲ್ಲ. ಇದಾದ ನಂತರವೂ ಯಾರಾದರೂ ತಪ್ಪು ಮಾರ್ಗವನ್ನು ಅಳವಡಿಸಿಕೊಂಡರೆ ರಾಜನು ತನ್ನ ಪ್ರಜೆಗಳನ್ನು ರಕ್ಷಿಸಬೇಕು’ ಎಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮೋಹನ್ ಭಾಗವತ್ ಹೇಳಿದ್ದಾರೆ.
******
ರೋಡ್ ರೇಜ್ ಪ್ರಕರಣ: IAF ಅಧಿಕಾರಿ ಶಿಲಾದಿತ್ಯ ವಿರುದ್ದ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಚರ್ಚೆ ಗ್ರಾಸವಾಗಿದ್ದ ಬೆಂಗಳೂರಿನ ರಸ್ತೆಯೊಂದರಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ ದಾಖಲಾಗಿರುವ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಕೈಗೊಳ್ಳದಂತೆ ಬೆಂಗಳೂರು ನಗರ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರಶ್ನಿಸಿ ಅಧಿಕಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಏಪ್ರಿಲ್ 24ರಂದು ಮಧ್ಯಂತರ ನಿರ್ದೇಶನ ನೀಡಿದ್ದಾರೆ. ಏಪ್ರಿಲ್ 21 ರಂದು ಸಿ ವಿ ರಾಮನ್ ನಗರದ ಬಳಿ ಈ ಘಟನೆ ನಡೆದಿತ್ತು.
