ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಹರಳಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ರವರು ಕರ್ನಾಟಕ ಪಂಚಾಯತ್ ಐಕಾನ್ ಪ್ರಶಸ್ತಿಗೆ ಭಾಜನರಾದ ಹಿನ್ನಲೆಯಲ್ಲಿ ಪ್ರಶಸ್ತಿ ಲಭಿಸಲು ಅವಕಾಶ ಮಾಡಿಕೊಟ್ಟ ಶಾಸಕರು ಹೆಚ್ ಟಿ ಮಂಜು ಹಾಗೂ ನಮ್ಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮುಖಂಡರು ಹಾಗೂ ಸದಸ್ಯರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಅಧ್ಯಕ್ಷ ಅಶೋಕ್ ತಿಳಿಸಿದರು.
ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಬೆಂಗಳೂರಿನ
ಜೆಸಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಅಶೋಕ್ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜನಸ್ನೇಹಿ ಆಡಳಿತ ಹಾಗೂ ಗ್ರಾಮಪಂಚಾಯಿತಿ ಸರ್ವಾಂಗೀಣ ಅಭಿವೃದ್ದಿ ಮತ್ತು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಅರ್ಪಣಾ ಮನೋಭಾವದಿಂದ ಕೆಲಸ ನಿರ್ವಹಿಸುತ್ತಿರುವ ಅಶೋಕ್ ರವರನ್ನು ಪ್ರೆಸ್ ಕ್ಲಬ್ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಕರ್ನಾಟಕ ಪಂಚಾಯತ್ ಐಕಾನ್ ಪ್ರಶಸ್ತಿಗೆ ಭಾಜನರಾದ ಹರಳಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ರವರನ್ನು ಶಾಸಕ ಹೆಚ್ ಟಿ ಮಂಜು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಮು. ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮ ಹಾಗೂ ಹರಳಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷರು,ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಗ್ರಾಮಸ್ಥರು ಇದ್ದರು.
– ಮನು ಮಾಕವಳ್ಳಿ ಕೆ ಆರ್ ಪೇಟೆ
