ಬೆಂಗಳೂರು: ಐಸಿಎಸ್ಇ 10ನೇ ತರಗತಿ ಮತ್ತು ಐಎಸ್ಸಿ 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಇಂದು ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಆ ಮೂಲಕ ಈ ಭಾರಿ ಕೂಡ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಸದ್ಯ ಐಸಿಎಸ್ಇಯ ಅಧಿಕೃತ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಿದ್ದು, ಈ ವೆಬ್ಸೈಟ್ನಲ್ಲೂ ಫಲಿತಾಂಶ ನೋಡಲು ಅವಕಾಶ ನೀಡಲಾಗಿದೆ.
ಭಾರತದಾದ್ಯಂತ ನೂರಾರು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದರು. ಇದೀಗ ಫಲಿತಾಂಶ ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. 10ನೇ ತರಗತಿ ಪರೀಕ್ಷೆಯಲ್ಲಿ ಒಟ್ಟಾರೆ ಶೇ. 99.09 ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದು, 12ನೇ ತರಗತಿ ಪರೀಕ್ಷೆಯಲ್ಲಿ ಶೇ 99.02 ರಷ್ಟು ಮಕ್ಕಳು ಉತ್ತೀರ್ಣ ಆಗಿದ್ದಾರೆ.
ಫಲಿತಾಂಶ ನೋಡುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ಸೈಟ್ಗಳಾದ cisce.org ಅಥವಾ results.cisce.org ಗೆ ಭೇಟಿ ನೀಡಬೇಕು.
- ಐಸಿಎಸ್ಇ 10ನೇ ಫಲಿತಾಂಶ 2025 ಅಥವಾ ಐಎಸ್ಸಿ 12ನೇ ಫಲಿತಾಂಶ 2025 ಮೇಲೆ ಕ್ಲಿಕ್ ಮಾಡಬೇಕು.
- ಶಾಲೆ ವತಿಯಿಂದ ನೀಡಿರು ವಿಶಿಷ್ಟ ಐ.ಡಿ, ನೋಂದಣಿ ಸಂಖ್ಯೆ ಮತ್ತು ಕ್ಯಾಪ್ಚಾವನ್ನು ನಮೂದಿಸಬೇಕು.
- ಬಳಿಕ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.
- ಅಲ್ಲಿಯೇ ವೀಕ್ಷಿಸಬಹುದು ಅಥವಾ ಡೌನ್ಲೋಡ್ ಮಾಡಿಕೊಳ್ಳಬಹುದು.
ವಿದ್ಯಾರ್ಥಿಗಳು ಉತ್ತೀರ್ಣರಾಗಲು ಕನಿಷ್ಠ 33% ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 35% ಅಂಕಗಳನ್ನು ಗಳಿಸಬೇಕು. ಮರುಪರಿಶೀಲನಾ ಫಲಿತಾಂಶಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಮೇ 4 ರ ನಂತರ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ, ಶಾಲೆ, ವಿಷಯವಾರು ಅಂಕಗಳು ಮತ್ತು ಅಂತಿಮ ಫಲಿತಾಂಶ ಒಳಗೊಂಡಿರುತ್ತದೆ.
