
ಹಾಸನ: ಹಾಸನದಲ್ಲಿ ಫೆ.9 ರಂದು ನಗರದ ಸೈನ್ಸ್ ಕಾಲೇಜು ಆವರಣದಲ್ಲಿ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ಗತವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಹಾಸನದಲ್ಲಿ ಒಂದು ದೊಡ್ಡ. ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂಬ ಉದ್ದೇಶದಿಂದ ಇತ್ತಿಚೆಗೆ ಎಸ್.ಡಿ.ಎಂ ಕಾಲೇಜು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೂವತ್ತಕ್ಕೂ ಹೆಚ್ಚು ಕಲಾ ತಂಡಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ನಗರಸಭೆ ಅಧ್ಯಕ್ಷ ಚಂದ್ರೇಗೌಡ, ಜೆಡಿಎಸ್ ವಕ್ತಾರ ಹೊಂಗೆರೆ ರಘು, ಜೆಡಿಎಸ್ ಮುಖಂಡ ಶಿವಣ್ಣ ಇದ್ದರು.