ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದ ರಂಗದಬ್ಬ ಹಾಗೂ ಗ್ರಾಮದೇವರ ವಿಶೇಷ ಪೂಜಾ ಕಾರ್ಯಕ್ರಮ ಹಿನ್ನಲೆ. ಗ್ರಾಮಕ್ಕೆ ಇಂದು ಸಂಜೆ 7. ಗಂಟೆಗೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆ. ಭಕ್ತಾದಿಗಳು ಮತ್ತು ಅಕ್ಕ ಪಕ್ಕ ಗ್ರಾಮಗಳ ಸರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮಕ್ಕೆ ಮೆರಗು ತುಂಬಬೇಕು ಎಂದು ಗ್ರಾಮದ ಮುಖಂಡರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
