ಟಿ.ನರಸೀಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂತೇಮಾಳದಲ್ಲಿ ಮೇ 08ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಉದಯಕುಮಾರ್ ಹೆಚ್.ವಿ. ರವರು ತಿಳಿಸಿದ್ದಾರೆ.
ಪಟ್ಟಣದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಉದ್ಯೋಗ ಮೇಳದಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಆಯ್ಕೆ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು. ಪದವಿ ಪೂರ್ವ, ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಪದವೀಧರರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಆಕ್ಸಿಸ್ ಬ್ಯಾಂಕ್, ಎಸ್ಬಿಐ, ಮುತ್ತೂಟ್ ಫೈನಾನ್ಸ್, ಕ್ಯಾಡ್ಮಾಸ್,ಎಲೆಕ್ಟ್ರಾನಿಕ್ಸ್ ಕಂಪನಿಗಳು ಸೇರಿದಂತೆ ವಿವಿಧ ಕಂಪನಿಗಳು ಭಾಗವಹಿಸಲಿದೆ. ವಿದ್ಯಾರ್ಥಿಗಳು ಅಂಕಪಟ್ಟಿ ಸೇರಿದಂತೆ ಮೂಲ ದಾಖಲಾತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕೆಂದರು.
ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿಗಳಾದ ರಾಮಮೂರ್ತಿ ಬಿ ಎಂ ಮೊ.ಸಂ. 9964180167 ಮತ್ತು ಸವಿತಾ ಪಿ.ಆರ್. ಮೊ.ಸಂ. 9663110994 ಇವರನ್ನು ಸಂಪರ್ಕಿಸಲು ತಿಳಿಸಿರುತ್ತಾರೆ.
– ಎಂ. ನಾಗೇಂದ್ರ ಕುಮಾರ್ ವರದಿಗಾರರು
