ಬೆಂಗಳೂರು : ಬೆಂಗಳೂರಿನ ಸಿದ್ಧಯ್ಯ ರಸ್ತೆಯ ಕನ್ನಡ ಯುವ ಜನ ಸಂಘದಲ್ಲಿ ಪ್ರತಿ ವಾರದ ಗುರುವಾರ ಸಂಜೆಯ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಈ ವಾರದಲ್ಲಿ ಶೇಷಾದ್ರಿಪುರಂ ಕಾಲೇಜಿನ ಕನ್ನಡ ಪ್ರಾಧ್ಯಾಪಕ, ಸಾಹಿತಿ ಡಾ.ಎಸ್.ರಾಮಲಿಂಗೇಶ್ವರ ( ಸಿಸಿರಾ) ಅವರು ” ಜಾನಪದ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು” ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಕನ್ನಡ ಯುವ ಸಂಘದ ಸದಸ್ಯರು ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಜನ ಸಂಘದ ಅಧ್ಯಕ್ಷ ಜಗದೀಶ್ ರೆಡ್ಡಿ ವಹಿಸಲಿದ್ದು, , ಕುವೆಂಪು ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿಸಿ ಎಂ.ಸಿ.ನರೇಂದ್ರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಂಘದ ಕಾರ್ಯದರ್ಶಿ ಮಹಾಂತೇಶ ದೇಗಾವಿ ಪ್ರಾಸ್ತಾವಿಕವಾಗಿ ಮಾತನಾಡುವರು.ಸಾರ್ವಜನಿಕರು, ಸಾಹಿತ್ಯ ಸಂಸ್ಕೃತಿ ಪ್ರಿಯರು ಸಮಾರಂಭದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
