ಟಿ.ನರಸೀಪುರ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾದ ಡಾ.ಹೆಚ್.ವಿ.ಉದಯಕುಮಾರ್ ಉದ್ಯೋಗ ಮೇಳ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ,ಪಿಯುಸಿ, ಪದವಿ ಹಾಗೂ ಪಿಜಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆ ಇಟ್ಟಿದ್ದು ವಿದ್ಯಾರ್ಥಿಗಳಿಗೆ ವರದಾನವಾಗಿದೆ.


ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಇರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಏಳೆಂಟು ಕಂಪನಿಗಳು ಭಾಗಿಯಾಗಿದ್ದವು ನೂರಾರು ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ವಿ.ಉದಯಕುಮಾರ್ ಮಾತನಾಡಿ ಉದ್ಯೋಗ ಮೇಳಕ್ಕೆ ಒಂದು ತಿಂಗಳಿನಿಂದ ತಯಾರಿ ನಡೆಸಿದ್ದೆವು.ನಮ್ಮ ತಾಲ್ಲೂಕಿನ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಆಗಮಿಸಿ ಮೇಳದಲ್ಲಿ ಭಾಗವಹಿಸಿದ್ದಾರೆ.ಅವರ ವಿದ್ಯಾರ್ಹತೆಗೆ ಅನುಗುಣವಾದ ಕೆಲಸ ಪಡೆಯಲು ಸಹಕಾರಿಯಾಗಿದೆ.200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ.ನಮ್ಮ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಧ್ಯಾಪಕರುಗಳಾದ ಡಾ.ಕೆಂಪರಾಜು,ಡಾ.ರೇಷ್ಮ ಚೆಂಗಪ್ಪ,ಡಾ.ಪುಟ್ಟಸ್ವಾಮಿ,ಡಿ.ಎಂ.ರಾಮಮೂರ್ತಿ,ಸವಿತಾ ಪಿ.ಆರ್ ಸೇರಿದಂತೆ ಇತರರಿದ್ದರು.
–-ಎಂ. ನಾಗೇಂದ್ರ ಕುಮಾರ್
