ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಬಂಪರ್ ಗುಡ್ನ್ಯೂಸ್ ಬಂದಿದ್ದು. ಇದರಿಂದ ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಆಗಲಿದ್ದು ಕರ್ನಾಟಕದ ಈ ಭಾಗದಲ್ಲಿ ಭೂಮಿ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಹೆಚ್ಚಳವಾಗಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಇದರಿಂದ ರಾಜ್ಯದ ವಿವಿಧ ಭಾಗದಲ್ಲಿ ಭೂಮಿಯ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಇದೆ. ರಾಜ್ಯದ ಯಾವ ಭಾಗದಲ್ಲಿ ಹೆದ್ದಾರಿ ಅಭಿವೃದ್ಧಿ ಆಗುತ್ತಿದೆ. ಇದು ಭೂಮಿ ಬೆಲೆ ಹೆಚ್ಚಳಕ್ಕೆ ಹೇಗೆ ಸಹಕಾರಿಯಾಗಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಕರ್ನಾಟಕದ ದಕ್ಷಿಣ ಭಾಗದಲ್ಲಿ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಯ ನಂತರ ಇದೀಗ ಉತ್ತರ ಕರ್ನಾಟಕದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಮುಂದಾಗಿದೆ. ರಾಜ್ಯದ ಸಂಸದರು ಹಾಗೂ ಸಚಿವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರವು ಕರ್ನಾಟಕದ ಪ್ರಮುಖ ಯೋಜನೆಯೊಂದರ ಅನುಷ್ಠಾನಕ್ಕೆ ಮುಂದಾಗಿದೆ. ಇದರ ಭಾಗವಾಗಿ ಹುಬ್ಬಳ್ಳಿ – ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ಮಾರ್ಗವಾಗಿ ಬದಲಾಯಿಸಲು ನಿರ್ಧರಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ.
296 ಕಿಮೀ ಹೆದ್ದಾರಿ: ಇನ್ನು ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ವಿಸ್ತೀರ್ಣವು ಬರೋಬ್ಬರಿ 296 ಕಿ.ಮೀ. ಇದೆ. ಈಗಾಗಲೇ ಸೊಲ್ಲಾಪುರದಿಂದ ವಿಜಯಪುರವರೆಗೆ 110 ಕಿ.ಮೀ ಹೆದ್ದಾರಿ ಮಾರ್ಗವನ್ನು ಚತುಷ್ಪಥವಾಗಿ ಬದಲಾಯಿಸಲಾಗಿದೆ. ಇನ್ನುಳಿದ 186 ಕಿ.ಮೀ ಹೆದ್ದಾರಿ ವಿಸ್ತರಣೆ ಆಗಬೇಕಾಗಿದೆ. ಇನ್ನು ಈ ಹೆದ್ದಾರಿ ವಿಸ್ತರಣೆಯ ಮತ್ತೊಂದು ಪ್ರಮುಖ ಅಂಶವೆಂದರೆ, ಇದರಿಂದ ಗದ್ದನಕೇರಿ ಕ್ರಾಸ್ನಲ್ಲಿ ಪ್ರೈಓವರ್ ನಿರ್ಮಾಣವಾಗಲಿದೆ. ಈ ಭಾಗದಲ್ಲಿ ಕಳೆದ ಎರಡರಿಂದ ಮೂರು ವರ್ಷಗಳಿಂದ ಭಾರೀ ಅಪಘಾತಗಳು ಸಂಭವಿಸುತ್ತಿದ್ದವು. ಇದೀಗ ಈ ರಸ್ತೆಯನ್ನು ವಿಸ್ತರಿಸುವುದರಿಂದ ಅಪಘಾತಗಳು ತಪ್ಪಲಿವೆ ಎಂದು ಇಲ್ಲಿನ ಜನ ನಿರೀಕ್ಷೆ ಮಾಡುತ್ತಿದ್ದಾರೆ.
ಇನ್ನು ಈ ಹೆದ್ದಾರಿಯನ್ನು ವಿಸ್ತರಣೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯದ ಸಂಸದರು ಹಾಗೂ ಸಚಿವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು. ಚತುಷ್ಪಥ ಹೆದ್ದಾರಿಗೆ ಸಂಬಂಧಿಸಿದಂತೆ ಪೂರ್ಣ ಯೋಜನಾ ವರದಿಯನ್ನು ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಕೇಂದ್ರಕ್ಕೆ ಮನವಿ: ಇನ್ನು ಈ ಭಾಗದಲ್ಲಿ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ರಾಜ್ಯಸಭೆ ಸದಸ್ಯ ಭಾಂಡಗೆ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಲಾಗಿದೆ.
ಭೂಮಿ ಬೆಲೆ ಹೆಚ್ಚಳ ಸಾಧ್ಯತೆ: ಇನ್ನು ಹೊಸ ರಾಷ್ಟ್ರೀಯ ಹೆದ್ದಾರಿ ಮಾರ್ಗವು ವಿವಿಧ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸಲಿದೆ. ಹೀಗಾಗಿ ವಿವಿಧ ಭಾಗದಲ್ಲಿ ಭೂಮಿಯ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಈಗಾಗಲೇ ಈ ಭಾಗದಲ್ಲಿ ಉದ್ದೇಶಿತ ಯೋಜನೆಯಿಂದ ರಿಯಲ್ ಎಸ್ಟೇಟ್ ಚುರುಕುಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬರಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
