ಕೆ.ಆರ್.ಪೇಟೆ, ಮೇ 14: ತಾಲ್ಲೂಕಿನ ಕತ್ತರಘಟ್ಟ-ಹೊಸಹೊಳಲು ರಸ್ತೆಯ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ ಸುಮಾರು 1 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹೊಸಹೊಳಲು ಗ್ರಾಮದ ನಿವಾಸಿ ಬಾಲಕೃಷ್ಣ (55) ಅವರು ಚಲಿಸುತ್ತಿದ್ದ ಬೈಕ್ಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೊಬ್ಬ ಸವಾರ, ದೊಡ್ಡಯಾಚೇನಹಳ್ಳಿಯ ಕೃಷ್ಣ ಎಂಬ ಟೈಲರ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಬಾಲಕೃಷ್ಣ ಅವರ ಪತ್ನಿ, ಇಬ್ಬರು ಮಕ್ಕಳು, ಸಹೋದರ-ಸಹೋದರಿ ಸೇರಿ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಪುರಸಭಾ ಸದಸ್ಯ ಹೆಚ್.ಆರ್. ಲೋಕೇಶ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
