ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀರುವಳ್ಳಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ನಾಗಮ್ಮ ಬಾಂಬೆ ಬಲರಾಮೇಗೌಡ ,ಉಪಾಧ್ಯಕ್ಷರಾಗಿ ಅರೆನಹಳ್ಳಿ ಮಹಾದೇವಪ್ಪ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ.
ಸಂಘದ ಮುಂದಿನ ಐದು ವರ್ಷದ ಆಡಳಿತ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಎಂ ಚೇತನ್ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಮೀಳಾ 6 ಮತಗಳ ಪಡೆದು ಸೋಲುಂಡರೆ.ಬಿಜೆಪಿ ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳಾಗಿ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ್ದ ನಾಗಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಮಹದೇವಪ್ಪ ಇಬ್ಬರು ತಲಾ 7 ಮತಗಳ ಪಡೆದು ಗೆಲುವು ಸಾಧಿಸಿದ್ದಾರೆ.
ಬೆಂಬಲಿಗರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷೆ ಮಾತನಾಡಿ ನಾಗಮ್ಮ ನಮ್ಮ ನಾಯಕರಾದ ಶಾಸಕ ಹೆಚ್.ಟಿ ಮಂಜು ಹಾಗೂ ಮಾಜಿ ಸಚಿವ ಕೆ.ಸಿ ನಾರಾಯಣಗೌಡರ ಮಾರ್ಗದರ್ಶನದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ನಿರ್ದೇಶಕರ ಹಾಗೂ ಮುಖಂಡರ ಸಹಕಾರದಿಂದ ಚುನಾವಣೆ ಮೂಲಕ ಅಧ್ಯಕ್ಷರಾಗಿದ್ದೇನೆ, ನನ್ನ ಆಡಳಿತ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುವ ಮೂಲಕ ಶ್ರಮಿಸುತ್ತೇನೆ. ಹಾಲು ಉತ್ಪಾದಕರು ಗುಣಮಟ್ಟದ ಹಾಲು ಸರಬರಾಜು ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದವರು ಗೆಲುವಿಗೆ ನಿರ್ದೇಶಕರಿಗೆ ಹಾಗೂ ಮುಖಂಡರು ಎಲ್ಲರಿಗೂ ಧನ್ಯವಾದಗಳು ಎಂದರು.
ಈ ಸಂದರ್ಭದಲ್ಲಿ ಬಿರುವಳ್ಳಿ ಡೈರಿ ನೂತನ ಉಪಾಧ್ಯಕ್ಷ ಮಹದೇವಪ್ಪ, ನಿರ್ದೇಶಕರಾದ ಬಿ.ಎಲ್ ನಾಗೇಂದ್ರ ಪರಶುರಾಮ, ಧರ್ಮೇಗೌಡ, ರವಿ, ತಿಮ್ಮಾಜಮ್ಮ, ನಿರ್ದೇಶಕರಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.
– ಮನು ಮಾಕವಳ್ಳಿ ಕೆ ಆರ್ ಪೇಟೆ
