ಕೆ.ಆರ್.ಪೇಟೆ: ಗ್ರಾಮೀಣ ಪ್ರದೇಶದ ರೈತರ ಸದೃಢತೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರಿಯ ಜಾನುವಾರು ಮಿಷನ್ ಯೋಜನೆ ಪ್ರತಿಯೊಬ್ಬರೂ ಸದ್ಬಳಿಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಹೆಚ್.ಟಿ ಮಂಜು ತಿಳಿಸಿದರು.
ಪಟ್ಟಣದ ಶಿಕ್ಷಕರ ಭವನದಲ್ಲಿ ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರಾಷ್ಟ್ರಿಯ ಜಾನುವಾರು ಮಿಷನ್ ಯೋಜನೆ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳನ್ನು ಒಂದಾದ ರಾಷ್ಟ್ರಿಯ ಜಾನುವಾರು ಮಿಷನ್ ಯೋಜನೆ ಗ್ರಾಮೀಣ ವಿಭಾಗದ ಪ್ರತಿಯೊಬ್ಬ ರೈತರಿಗೂ ವರದಾನವಾಗಿದೆ ಅರ್ಹ ಫಲಾನುಭವಿಗಳು ಸದ್ಬಳಿಕೆ ಮಾಡಿಕೊಳ್ಳಬೇಕು.ಈ ಯೋಜನೆಯ ಸೌಲಭ್ಯ ಪಡೆಯಲು ದೇಶದ ಎಲ್ಲಾ ರಾಜ್ಯಗಳಿಂತಲೂ ಕರ್ನಾಟಕದಿಂದ ಅತೀ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ.ಆದರೆ ರೈತರು ಸಲ್ಲಿಸಿದ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.ಕೇಂದ್ರ ಸರ್ಕಾರ ಅಸಂಘಟಿತ ವಲಯದಲ್ಲಿನ ರೈತರು, ಉದ್ಯಮಿಗಳನ್ನು ಸಂಘಟಿತ ವಲಯಕ್ಕೆ ಕರೆದೊಯ್ಯುವುದೇ ಈ ಯೋಜನೆ ಉದ್ದೇಶವಾಗಿದೆ. ಜಾನುವಾರು ಉತ್ಪನ್ನ ಹಾಲು, ಮಾಂಸ, ಮೊಟ್ಟೆ, ಉಣ್ಣೆಗಳ ಉತ್ಪಾದನೆ ಹೆಚ್ಚಿಸುವುದು, ಅಲ್ಲದೇ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಮತ್ತು ಮೌಲ್ಯವರ್ಧಿತ ಜಾನುವಾರುಗಳ ಉತ್ಪನ್ನಗಳನ್ನು ಒದಗಿಸುವುದಾಗಿದೆ. ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡುವುದು ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಸದ್ದುದೇಶ ಹೊಂದಿದೆ ಎಂದರು.

ಜಿಲ್ಲಾ ಪಶುಪಾಲನ ಉಪ ನಿರ್ದೇಶಕ ಸುರೇಶ್ ಮಾತನಾಡಿ ಶಾಸಕ ಎಚ್.ಟಿ ಮಂಜು ರವರ ಆಸಕ್ತಿಯಿಂದ ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಾಷ್ಟ್ರೀಯ ಜಾನುವಾರು ಮಿಷನ್ ಪ್ರಗತಿಪರ ಜೀವನ ಸಭೆ ನಡೆಯುತ್ತಿದೆ. ಈ ಯೋಜನೆಯಡಿ ರೈತರು ಸ್ವ-ಉದ್ಯೋಗ ಮಾಡಲು ಸಾಲ ಮತ್ತು ಸಹಾಯಧನ ಪಡೆಯಬಹುದಾಗಿದೆ.ಗಾಮೀಣ ಭಾಗದಲ್ಲಿ ಕೋಳಿ ಸಾಕಣೆ, ಕುರಿ, ಮೇಕೆ, ಹಂದಿ ಸಾಕಣೆ ಮತ್ತು ರಸಮೇವು ಉತ್ಪಾದನೆ ಘಟಕಗಳನ್ನು ಆರಂಭಿಸಲು ಆರ್ಥಿಕ ನೆರವು ನೀಡಲಾಗುತ್ತದೆ ಕಡಿಮೆ ಪ್ರಮಾಣದಲ್ಲಿ ಈ ಉದ್ದಿಮೆಯನ್ನು ಪ್ರಾರಂಭಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಶೇ. 50 ರಷ್ಟು ಸಬ್ಸಿಡಿ ನೀಡುವ ಮೂಲಕ ರೈತರಿಗೆ ಪ್ರೋತ್ಸಾಹ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಯೋಜನೆ ಬಗ್ಗೆ ಮತ್ತಷ್ಟು ಮಾಹಿತಿ ತಿಳಿಸಿದರು.
ಬಳಿಕ ಮಾತನಾಡಿದ ರೈತ ಭೈರಪುರ ಹರೀಶ್ ಯಾವುದೇ ಸರ್ಕಾರ ಯೋಜನೆಗಳು ಅನುಷ್ಠಾನಕ್ಕೆ ತಂದರೂ ಕೂಡ ಸಂಬಂಧ ಪಟ್ಟ ಅಧಿಕಾರಿಗಳು ರೈತರಿಗೆ ಯೋಜನೆಗಳ ಬಗ್ಗೆ ಸಂಪೂರ್ಣ ಅರಿವು ಮೂಡಿಸದೆ ಜನಸ್ನೇಹಿ ಯೋಜನೆಗಳನ್ನು ಮೂಲೆ ಹಿಡಿಯುವಂತೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿ. ಇಂತಹ ಯೋಜನೆಯಗಳು ಸಾಮಾನ್ಯ ಜನರಿಗೆ ತಲುಪುವ ನಿಟ್ಟಿನಲ್ಲಿ ನಮ್ಮ ಶಾಸಕರ ಪರಿಕಲ್ಪನೆ ನಿಜಕ್ಕೂ ಸ್ವಾಗತ ಅದಕ್ಕೆ ಪೂರಕವಾಗಿ ಇಲಾಖೆಯ ಅಧಿಕಾರಿಗಳು ಜನಸಾಮಾನ್ಯರಿಗೆ ಸ್ಪಂದಿಸಿ ಯೋಜನೆ ತಲುಪುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯ ಲೀಡ್ ಬ್ಯಾಂಕ್ ಮೆನೇಜರ್ ಅರುಣ್, ದಿಶಾ ಕಮಿಟಿ ಸದಸ್ಯ ನರಸನಾಯಕ, ತಾಲೂಕು ಪಶುಪಾಲನ ಸಹಾಯಕ ನಿರ್ದೇಶಕ ದೇವರಾಜು,ತಾ.ಪಂ ಮಾಜಿ ಸದಸ್ಯರಾದ ಮಲ್ಲೇನಹಳ್ಳಿ ಮೋಹನ್, ಬೂಕನಕೆರೆ ಹುಲ್ಲೆಗೌಡ,ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಬಲದೇವ್, ಕಸಬಾ ಜೆಡಿಎಸ್ ಅಧ್ಯಕ್ಷ ವಸಂತಕುಮಾರ್,ಅಕ್ಕಿಹೆಬ್ಬಾಳು ಜೆಡಿಎಸ್ ಅಧ್ಯಕ್ಷ ಬಸವಲಿಂಗಪ್ಪ, ನಂದೀಶ್,ಪುರಸಭಾ ಸದಸ್ಯ ಗಿರೀಶ್,ಜೆಡಿಎಸ್ ಮಹಿಳಾ ಘಟಕ ಅಧ್ಯಕ್ಷೆ ರೇಖಾ,ರತಿ, ಲಕ್ಷ್ಮಮ್ಮ,ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್,ಯುವ ಮುಖಂಡ ನಾಟನಹಳ್ಳಿ ದಿಲೀಪ್, ಯಡಹಳ್ಳಿ ಪ್ರಶಾಂತ್ ಸೇರದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
