ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಬಿಕನೇರ್ ನಗರಕ್ಕೆ ಆಗಮಿಸಿ, ರಾಜ್ಯದ 5 ರೈಲು ನಿಲ್ದಾಣಗಳೊಂದಿಗೆ ಒಟ್ಟಿಗೆ ದೇಶದ 103 ಅಮೃತ ರೈಲ್ವೆ ನಿಲ್ದಾಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದ್ದಾರೆ.
ಅಮೃತ ಭಾರತ ನಿಲ್ದಾಣ ಯೋಜನೆಯಡಿ ಪುನರಾಬೂತಗೊಂಡ ಈ ನಿಲ್ದಾಣಗಳು ಭಾರತೀಯ ರೈಲ್ವೆಯ ಆಧುನೀಕರಣದ ಮಹತ್ವದ ಹಂತವೆಂದು ತಿಳಿಸಲಾಗಿದೆ.
ಕರ್ನಾಟಕದಿಂದ ಕಪ್ಪಳ ಜಿಲ್ಲೆಯ ಮುನಿರಾಬಾದ್, ಬಾಗಲಕೋಟೆ, ಗದಗ, ಬೆಳಗಾವಿ ಜಿಲ್ಲೆಯ ಗೋಕಾಕ್ ರಸ್ತೆ ಹಾಗೂ ಧಾರವಾಡ ರೈಲು ನಿಲ್ದಾಣಗಳು ಈ ಯೋಜನೆಯಡಿಯಲ್ಲಿ ಅಭಿವೃದ್ಧಿಗೊಂಡಿವೆ.
ಒಟ್ಟು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳಲ್ಲಿ, ₹1,100 ಕೋಟಿ ವೆಚ್ಚದಲ್ಲಿ 103 ಅಮೃತ್ ನಿಲ್ದಾಣಗಳನ್ನು ಸುಂದರಗೊಳಿಸಲಾಗಿದೆ.
ಪ್ರಧಾನಿ ಮೋದಿ ಪ್ರಕಟಿಸಿದಂತೆ, ತಡರಾತ್ರಿ ರೈಲು ಪ್ರಯಾಣಿಕರಿಗೆ ನಿಲ್ದಾಣದಲ್ಲಿ ತಂಗಲು ಅವಕಾಶ ಕಲ್ಪಿಸುವ ವ್ಯವಸ್ಥೆಯೂ ಒದಗಿಸಲಾಗಿದೆ.
ಭಾರತದ ರೈಲ್ವೆ ಇಲಾಖೆಯ ಆಧುನೀಕರಣಕ್ಕಾಗಿ ಇದೊಂದು ದೊಡ್ಡ ಹೆಜ್ಜೆಯಾಗಿ ಈ ಕಾರ್ಯಕ್ರಮವನ್ನು ನಿರೂಪಿಸಲಾಗುತ್ತಿದೆ.
