ಚಿಕ್ಕಮಗಳೂರು-ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾ*ವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತಣಿಗೆಬೈಲು ಗ್ರಾಮದಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ಮೂಲದ 55 ವರ್ಷದ ವಿನೋದಾ ಬಾಯಿ ಕಾಡಾನೆ ದಾಳಿಗೆ ಸಾ*ವನ್ನಪ್ಪಿದ ಕಾರ್ಮಿಕ ಮಹಿಳೆ.
ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ ವಿನೋದಾ ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ತಣಿಗೆಬೈಲು ರೇಂಜ್ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿದ್ದಾರೆ.
