
ಚಾರ್ಮಾಡಿ ಘಾಟಿನಲ್ಲಿ ಭಾರಿ ಪ್ರಮಾಣದ ಕಾಡು ಕಿಚ್ಚು
ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರ ಸಾಹಸ
ಚಿಕ್ಕಮಗಳೂರು:ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯದಲ್ಲಿ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ. ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರ ಸಾಹಸಪಟ್ಟಿದ್ದಾರೆ.
ಶುಕ್ರವಾರ ಸಂಜೆ ಘಟನೆ ನಡೆದಿದ್ದು,ಬೆಂಕಿಯ ಕೆನ್ನಾಲಿಗೆ 10 ಕಿ.ಲೋ ಮೀಟರ್ ದೂರಕ್ಕೂ ಕಾಣಿಸುತ್ತಿದೆ. ಅಗ್ನಿ ಅವಘಡ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದೆ. ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ಸರಿಯಿಲ್ಲ ಎಂದು ಸ್ಥಳೀಯರು ಕೆಂಡಕಾರಿದ್ದಾರೆ.
ಇನ್ನೂ ಚಾರ್ಮಾಡಿ ಘಾಟಿನ ಸ್ವಾಮಿ ದೇಗುಲದ ಸಮೀಪ ಆವರಿಸಿದ ಕಾಡ್ಗಿಚ್ಚುನ್ನು ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬೆಂಕಿ ನಂದಿಸಲು ಸಾಧ್ಯವಾಗದೆ ಪರದಾಡುವಂತಾಯ್ತು.