
ಕೆ.ಆರ್.ಪೇಟೆ: ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕೆ.ಆರ್.ಪೇಟೆ: ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪಿ.ಎಲ್.ಡಿ. ಬ್ಯಾಂಕ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಚುನಾವಣೆಯ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಕುರಿತು ಮಾತನಾಡಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಸ್ಥಳೀಯ ಸಹಕಾರ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯು ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಸ್ಪರ್ಧಿಸುವ ಚುನಾವಣೆಯಾಗಿವೆ. ಈ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬಿ ಅವರನ್ನು ಗೆಲ್ಲಿಸಿದರೆ ಪಕ್ಷವು ತಳಮಟ್ಟದಲ್ಲಿ ಗಟ್ಟಿಯಾದ ಪಕ್ಷದ ಬಲವರ್ಧನೆಗೆ ಸಹಕಾರಿಯಾಗುತ್ತದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದ ಕಾರ್ಯಕರ್ತರು ಅಥವಾ ಪರಭಾವಗೊಂಡ ಕಾರ್ಯಕರ್ತರು ಪಕ್ಷವು ತಮ್ಮನ್ನು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ಪಕ್ಷವನ್ನು ಸಂಘಟಿಸಲು ತೊಡಗಿಸಿಕೊಳ್ಳುತ್ತಾರೆ ಇದು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಗೆಲುವಿನ ಗುರಿ ಮುಟ್ಟಲು ಸಹಕಾರಿಯಾಗುತ್ತದೆ. ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಸಹಕಾರ ಸಂಸ್ಥೆಗಳ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುತ್ತಿರಲಿಲ್ಲ. ಆಗ ಕಾಂಗ್ರೆಸ್ ಕಾರ್ಯಕರ್ತರ ಬೇರೆ ಬೇರೆ ಪಕ್ಷಗಳಿಗೆ ವಲಸೆ ಹೋಗುತ್ತಿದ್ದರು. ಆದರೆ ಮಾಜಿ ಸ್ಪೀಕರ್ ಕೃಷ್ಣ ಅವರು ನಮ್ಮ ಕಾಂಗ್ರೆಸ್ ಪಕ್ಷವನ್ನು ಸೇರಿದ ನಂತರ ತಾಲ್ಲೂಕಿನಲ್ಲಿ ನಡೆಯುವ ಸೊಸೈಟಿಗಳು, ಎಪಿಎಂಸಿ, ಟಿಎಪಿಸಿಎಂಎಸ್, ಹಾಲು ಉತ್ಪಾದಕರ ಸಹಕಾರ ಸಂಘಗಳು ಸೇರಿದಂತೆ ಎಲ್ಲಾ ಎಲ್ಲಾ ಸಹಕಾರ ಸಂಸ್ಥೆಗಳ ಚುನಾವಣೆಯಲ್ಲಿ ಕಡ್ಡಾಯವಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಗೆಲ್ಲಿಸಲಾಗುತ್ತಿದೆ. ಇದರಿಂದ ಪಕ್ಷದ ಕಾರ್ಯಕರ್ತರಿಗೆ ಸ್ಥಳೀಯವಾಗಿ ಗೆದ್ದು ಪಕ್ಷದ ಸಂಘಟನೆಗೆ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ. ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದ ನಂತರ ಟಿಎಪಿಸಿಎಂಎಸ್, ಪಿ.ಎಲ್.ಡಿ. ಬ್ಯಾಂಕ್, ಎಪಿಎಂಸಿ ಸೇರಿದಂತೆ ಹಲವು ಸಹಕಾರ ಸಂಸ್ಥೆಗಳಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದ ಗದ್ದುಗೆಯನ್ನು ಏರಲು ಸಾಧ್ಯವಾಗಿತ್ತು. ಈಗ ಅದೇ ಉತ್ಸಾಹದೊಂದಿಗೆ ಸ್ಥಳೀಯ ಸಹಕಾರ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ನಮ್ಮ ಕಾಂಗ್ರೆಸ್ ಪಕ್ಷದಿಂದ ಸಾಕಷ್ಟು ಆಕಾಂಕ್ಷಿಗಳು ಮುಂದೆ ಬರುತ್ತಿದ್ದಾರೆ. ಇದೀಗ ಪಿ.ಎಲ್.ಡಿ ಬ್ಯಾಂಕ್ ಚುನಾವಣೆ ಫೆ.8ರಂದು ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ 14ಸ್ಥಾನಗಳಿಗೆ ಸುಮಾರು 40ಮಂದಿ ಆಕಾಂಕ್ಷಿಗಳು ತಮ್ಮ ಹೆಸರನ್ನು ತಾಲ್ಲೂಕು ಕಾಂಗ್ರೆಸ್ ಸಮಿತಿಗೆ ನೊಂದಾಯಿಸಿದ್ದಾರೆ. ಯಾರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಚುನಾವಣಾ ಕ್ಷೇತ್ರದ ಗ್ರಾಮಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಮೂರು ದಿನಗಳಲ್ಲಿ ಅಂತಿಮಗೊಳಿಸಲಾಗುವುದು. ಇಲ್ಲಿ ಅವಕಾಶ ತಪ್ಪಿದವರಿಗೆ ಟಿಎಪಿಸಿಎಂಎಸ್, ಎಪಿಎಂಸಿ, ಟಿಎಪಿಸಿಎಂಎಸ್, ಜಿ.ಪಂ, ತಾ.ಪಂ.ಚುನಾವಣೆಗಳಲ್ಲಿ ಸ್ಪರ್ಧಿಸಲು ಪಕ್ಷವು ಅವಕಾಶ ಕಲ್ಪಿಸಿಕೊಡುತ್ತದೆ. ಪುರಸಭೆ, ಮುಜರಾಯಿ ಆರಾಧನಾ ಸಮಿತಿ, ಪುರಸಭೆ ಆಶ್ರಯ ಕಮಿಟಿ, ತಾ.ಪಂ.ಆಶ್ರಯ ಕಮಿಟಿ, ಎಪಿಎಂಸಿ, ಟಿಎಪಿಸಿಎಂಎಸ್, ಡಿಸಿಸಿ ಬ್ಯಾಂಕ್, ಹಾಗೂ ಸರ್ಕಾರದ ಅನುಧಾನ ಪಡೆದ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಸರ್ಕಾರಿ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕಾತಿ ಮಾಡಲು ಅವಕಾಶ ಇದೆ. ಈ ಹುದ್ದೆಗಳಿಗೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ನಾಮ ನಿರ್ದೇಶನ ಮಾಡಲು ಪಕ್ಷವು ಅಗತ್ಯ ಕ್ರಮ ಕೈಗೊಳ್ಳಲಿದೆ ಹಾಗಾಗಿ ಈಗ ನಡೆಯುತ್ತಿರುವ ಪಿ.ಎಲ್.ಡಿ.ಬ್ಯಾಂಕ್ ಚುನಾವಣೆಯಲ್ಲಿ ಒಮ್ಮತದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಶಕ್ತಿ ಮೀರಿ ಶ್ರಮಿಸಬೇಕು ಎಂದು ಕೆ.ಬಿ.ಚಂದ್ರಶೇಖರ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಸದಸ್ಯ ಕಿಕ್ಕೇರಿ ಸುರೇಶ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ನಾಗೇಂದ್ರಕುಮಾರ್, ಹೆಚ್.ಎಸ್.ವಿಶ್ವನಾಥ್, ತಾಲ್ಲೂಕು ಕಾಂಗ್ರೆಸ್ ಎಸ್.ಸಿ ವಿಭಾಗದ ಅಧ್ಯಕ್ಷ ರಾಜಯ್ಯ, ಶಿವಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೋಡಿಮಾರನಹಳ್ಳಿ ದೇವರಾಜು, ಹಿರೀಕಳಲೆ ರಾಂದಾಸ್, ಎಲ್.ಕೆ.ಮಂಜುನಾಥ್, ಎಲ್.ಪಿ.ನಂಜಪ್ಪ, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಅಗ್ರಹಾರಬಾಚಹಳ್ಳಿ ಎ.ಬಿ.ಕುಮಾರ್, ಪುರಸಭಾ ಸದಸ್ಯ ಡಿ.ಪ್ರೇಮಕುಮಾರ್, ಎಂ.ಪಿ.ಲೋಕೇಶ್, ಜಿಲ್ಲಾ ಮಟ್ಟದ ಕೆಡಿಪಿ ಸಮಿತಿ ಸದಸ್ಯ ಉಜೈಫ್, ತಾಲ್ಲೂಕು ದರಖಾಸ್ತು ಕಮಿಟಿ ಸದಸ್ಯರಾದ ಬಸ್ತಿ ರಂಗಪ್ಪ, ರಾಯಪ್ಪ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎ.ಎಸ್.ರಮೇಶ್, ರಾಮಕೃಷ್ಣ, ತಾಲ್ಲೂಕು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಲೋಲಾಕ್ಷಿಜಗದೀಶ್, ವಿನೂತ ಸುರೇಶ್, ಶಿವಮ್ಮ, ತಾಲ್ಲೂಕು ಕೆಡಿಪಿ ಸಮಿತಿ ಸದಸ್ಯರಾದ ಆಕಾಶ್, ಇಲ್ಯಾಸ್ ಪಾಷಾ, ಭದ್ರಿ, ಪಿ.ಎಲ್.ಡಿ.ಬ್ಯಾಂಕ್ ನಿರ್ದೇಶಕರಾದ ಕಬ್ಬಲಗೆರೆ ಪುಟ್ಟಸ್ವಾಮೀಗೌಡ, ರಾಜಾನಾಯಕ್, ಲಕ್ಷ್ಮಿಚಂದ್ರೇಗೌಡ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.