ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಅತ್ಯಪೂರ್ವ ಹಾಗೂ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸತತ ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದಿರುವ ಅವರು, ಭಾರತದಲ್ಲಿ ಅತಿ ದೀರ್ಘಾವಧಿಗೆ ಸೇವೆ ಸಲ್ಲಿಸಿದ ‘ಮೊದಲ ಚುನಾಯಿತ ಪ್ರಧಾನಿ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಮಹತ್ತರ ಸಾಧನೆಯ ಮೂಲಕ ಪ್ರಧಾನಿ ಮೋದಿಯವರು ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಅವರ ದಾಖಲೆಯನ್ನು ಅಧಿಕೃತವಾಗಿ ಹಿಂದಿಕ್ಕಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ಸೇರಿದಂತೆ ದೇಶದ ಹಲವು ಗಣ್ಯರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ನೆಹರು ದಾಖಲೆ ಮುರಿದ ಮೋದಿ:
ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರು ಅವರು 1952ರಲ್ಲಿ ಮೊದಲ ಬಾರಿಗೆ ದೇಶದ ಚುನಾಯಿತ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಿಂದ ಒಟ್ಟು 4,398 ದಿನಗಳ ಕಾಲ ಆ ಹುದ್ದೆಯಲ್ಲಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸದ್ಯ 4,399 ದಿನಗಳನ್ನು ಪೂರೈಸುವ ಮೂಲಕ ನೆಹರು ಅವರ ಈ ಸುದೀರ್ಘ ಅವಧಿಯ ದಾಖಲೆಯನ್ನು ಮೀರಿದ್ದಾರೆ.
ಕಿಚ್ಚ ಸುದೀಪ್ ಟ್ವೀಟ್ ವೈರಲ್:
ಪ್ರಧಾನಿ ಮೋದಿ ಅವರ ಈ ವಿಶಿಷ್ಟ ಸಾಧನೆಯನ್ನು ಶ್ಲಾಘಿಸಿ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ನಟ ಕಿಚ್ಚ ಸುದೀಪ್, ಮೋದಿ ಅವರ ದೃಢ ನಾಯಕತ್ವಕ್ಕೆ ಗೌರವ ಸಲ್ಲಿಸಿದ್ದಾರೆ:
“ಭಾರತದಲ್ಲಿ ಅತಿ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ. ಈ ಅಪರೂಪದ ಸಾಧನೆಯನ್ನು ನಾವೆಲ್ಲರೂ ಒಂದು ಕ್ಷಣ ನಿಂತು ಗೌರವಿಸಲೇಬೇಕು. 12 ವರ್ಷಗಳು, ಅದೇ ಎನರ್ಜಿ, ಅದೇ ವೇಗ, ಎಲ್ಲೂ ಕಿಂಚಿತ್ತೂ ದಣಿವೇ ಇಲ್ಲ. ನರೇಂದ್ರ ಮೋದಿ ಅವರೇ ನಿಮ್ಮ ಈ ಅಪಾರ ಸಮರ್ಪಣಾ ಭಾವ ಹಾಗೂ ಸಾಧನೆಗೆ ನನ್ನ ಹೃದಯಪೂರ್ವಕ ಸಲ್ಯೂಟ್. ಇದೊಂದು ಹೆಮ್ಮೆಯ ಕ್ಷಣ ಸರ್.” ಎಂದು ಸುದೀಪ್ ಬರೆದುಕೊಂಡಿದ್ದಾರೆ.
ಕಳೆದ 12 ವರ್ಷಗಳಿಂದ ದಣಿವರಿಯಿಲ್ಲದೆ ದೇಶಕ್ಕಾಗಿ ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರ ದಕ್ಷ ನಾಯಕತ್ವಕ್ಕೆ ಸುದೀಪ್ ನೀಡಿರುವ ಈ ಗೌರವದ ನುಡಿಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.
