
ಬೆಂಗಳೂರು: ಇತ್ತೀಚೆಗೆ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಪರ್ವ ನಡೆಯುತ್ತಿದ್ದು, ಇನ್ನೂ ಆರರಿಂದ ಏಳು ತಿಂಗಳಲ್ಲಿ 1200 ಪಿಎಸ್ ಐ ಗಳ ನೇಮಕಾತಿ ಮಾಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿದ್ದಾರೆ.
ಇದಕ್ಕೆ ಪೂರಕವೆಂಬಂತೆ, ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನೆನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯ ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸ್ ಟೇಬಲ್ ಹುದ್ದೆಯಿಂದ ಡಿವೈಎಸ್ ಪಿ ಹುದ್ದೆವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ಒಪ್ಪಿಗೆ ನೀಡಿರುವುದು ನಿಜಕ್ಕೂ ಸ್ವಾಗತರ್ಹವಾಗಿದ್ದು, ಇದು ಕ್ರೀಡಾಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಲಿದೆ.
ಕಾನೂನು ವ್ಯವಸ್ಥೆ ಕಾಪಾಡಲು, ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಇಲಾಖೆಯ ಸಿಬ್ಬಂದಿಗೆ ಪ್ರೋತ್ಸಹದಾಯಕವಾಗಿ, ಪಿಎಸ್ ಐ ಹುದ್ದೆಯ ನೇಮಕಾತಿಯಲ್ಲಿ ಸೇವಾ-ನಿರತ ಮೀಸಲಾತಿ ಕಲ್ಪಿಸಿದೆ. ಆದರೆ ಈ ಮೀಸಲಾತಿಯಿಂದ ಕಾರಾಗೃಹ ಸಿಬ್ಬಂದಿಗಳು ವಂಚಿತರಾಗಿದ್ದು, ನಮಗೂ ಸಹ ಪಿಎಸ್ ಐ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕಾರಾಗೃಹ ಸಿಬ್ಬಂದಿಗಳು ಗೃಹ ಸಚಿವಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ನಾಗರೀಕ ಪೊಲೀಸ್, ಜಿಲ್ಲಾ ಸಶಸ್ತ್ರ ಪೊಲೀಸ್, ರಾಜ್ಯ ಮೀಸಲು ಪೊಲೀಸ್ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕ ಭದ್ರತ ಪೊಲೀಸ್ ಸಿಬ್ಬಂದಿಗಳಿಗೆ ಲ್ಲಾರಿಗೂ ಪೊಲೀಸ್ ಸಬ್ ಇನ್ಸೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಸೇವಾ-ನಿರತ ಮೀಸಲಾತಿ ಕಲ್ಪಿಸಲಾಗಿದೆ. ನಾವು ಸಹ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ, ನಾವು ಸಹ ಕಾನೂನು ಸುವ್ಯಸ್ಥೆ ಕಾಪಾಡುವ ಕಾರ್ಯದಲ್ಲೇ ಇರುವುದರಿಂದ, ಅವರಂತೆ ನಮಗೂ ಪಿಎಸ್ ಐ ನೇಮಕಾತಿಯಲ್ಲಿ ಸೇವಾ-ನಿರತ ಮೀಸಲಾತಿ ಸಿಕ್ಕರೆ, ಅನುಕೂಲವಾಗುತ್ತದೆ ಎಂಬುದು ಕಾರಾಗೃಹ ಸಿಬ್ಬಂದಿಗಳ ಮನವಿಯಾಗಿದೆ.