
ಶುಭೋದಯ
ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮವನ್ನು ತಾವೇ ಕಂಡುಕೊಳ್ಳಬೇಕು
ಧರ್ಮದ ದಾರಿ ಒಂದಲ್ಲ,ಹಲವು
– ಕೆ.ಎಂ. ಮುನ್ಷಿ
********************************************************************************
1.ಮಹಿಳಾ ದಿನಾಚರಣೆಯಂದು ಗುಜರಾತ್ಗೆ ಮೋದಿ: ‘ಲಖ್ಪತಿ ದೀದಿ’ ಕಾರ್ಯಕ್ರಮದಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 8ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಗುಜರಾತಿನಲ್ಲಿ “ಲಖ್ಪತಿ ದೀದಿ” ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ 1.1 ಲಕ್ಷಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸುವ ನಿರೀಕ್ಷೆಯಿದೆ. ಇನ್ನು ಈ ಕಾರ್ಯಕ್ರಮದ ಸಂಪೂರ್ಣ ವ್ಯವಸ್ಥೆ ಮತ್ತು ಜವಾಬ್ದಾರಿ ಮಹಿಳಾ ಪೊಲೀಸರು ನಿರ್ವಹಿಸುತ್ತಿರುವುದು ವಿಶೇಷ.
*************************************************
2.ಲಂಡನ್ನಲ್ಲಿ ಸಚಿವ ಎಸ್ ಜೈಶಂಕರ್ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿಗೆ ಯತ್ನ
ಲಂಡನ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಮೇಲೆ ಖಲಿಸ್ತಾನ್ ಉಗ್ರರ ಗುಂಪೊಂದು ದಾಳಿ ನಡೆಸಲು ಯತ್ನಿಸಿದೆ ಎನ್ನವ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ, ಭಾರತೀಯ ಸಚಿವರು ಚೆವನಿಂಗ್ ಹೌಸ್ನಲ್ಲಿ ನಡೆದ ಕಾರ್ಯಕ್ರಮದಿಂದ ಹೊರಬಂದ ನಂತರ ಈ ಘಟನೆ ನಡೆದಿದೆ. ಆನ್ಲೈನ್ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ವ್ಯಕ್ತಿಯೊಬ್ಬ ವಿದೇಶಾಂಗ ಸಚಿವರ ಕಾರಿನ ಕಡೆಗೆ ಓಡಿಹೋಗಿ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದನ್ನು ತೋರಿಸಲಾಗಿದೆ. ಆನ್ಲೈನ್ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ವ್ಯಕ್ತಿಯೊಬ್ಬ ವಿದೇಶಾಂಗ ಸಚಿವರ ಕಾರಿನ ಕಡೆಗೆ ಓಡಿಹೋಗಿ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದನ್ನು ತೋರಿಸಲಾಗಿದೆ.
*******************************************
3.ಟೀಕಿಸುವ ಭರದಲ್ಲಿ ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ ಛಲವಾದಿ ನಾರಾಯಣಸ್ವಾಮಿ
ಸಿಎಂ ಸಿದ್ದರಾಮಯ್ಯ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ವೀಲ್ಚೇರ್ನಲ್ಲಿ ಓಡಾಡುತ್ತಿದ್ದಾರೆ. 76 ವರ್ಷವಾದರೂ ಪಕ್ಷದ ಚಟುವಟಿಕೆ, ಓಡಾಟ ಅಂತಾ ಬಂದ್ರೆ, ತುಂಬಾನೇ ಆ್ಯಕ್ಟೀವ್ ಆಗಿರುತ್ತಾರೆ. ಇದೀಗ ಮಂಡಿನೋವಿನಿಂದಾಗಿ ವೀಲ್ಚೇರ್ನಲ್ಲಿ ಓಡಾಡ್ತಿದ್ದಾರೆ. ಆದ್ರೆ ಸಿಎಂ ಸಿದ್ದರಾಮಯ್ಯರನ್ನ ಟೀಕಿಸೋ ಭರದಲ್ಲಿ, ಛಲವಾದಿ ನಾರಾಯಣಸ್ವಾಮಿ ನಾಲಗೆ ಹರಿಬಿಟ್ಟಿದ್ದು, ಕಾಂಗ್ರೆಸ್ ಪಾಳಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
**********************************************
4.ನಿವೃತ್ತಿ ನಿರ್ಧಾರವನ್ನು ಹಿಂಪಡೆದ ಕಾಲ್ಚೆಂಡಿನ ಚತುರ ಸುನಿಲ್ ಛೆಟ್ರಿ
Sunil Chhetri Reverses Retirement: 2024ರ ಜೂನ್ನಲ್ಲಿ ಅಂತರರಾಷ್ಟ್ರೀಯ ಫುಟ್ಬಾಲ್ನಿಂದ ನಿವೃತ್ತಿ ಹೊಂದಿದ್ದ ಸುನಿಲ್ ಛೆಟ್ರಿ ಅವರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ. ಮಾರ್ಚ್ 25 ರಂದು ಬಾಂಗ್ಲಾದೇಶದ ವಿರುದ್ಧ ನಡೆಯುವ ಏಷ್ಯನ್ ಕಪ್ ಅರ್ಹತಾ ಪಂದ್ಯಕ್ಕಾಗಿ ಅವರು ರಾಷ್ಟ್ರೀಯ ತಂಡಕ್ಕೆ ಮರಳುತ್ತಿದ್ದಾರೆ. 94 ಅಂತರರಾಷ್ಟ್ರೀಯ ಗೋಲುಗಳನ್ನು ಗಳಿಸಿರುವ ಛೆಟ್ರಿ ಅವರ ಮರಳುವಿಕೆ ಭಾರತೀಯ ಫುಟ್ಬಾಲ್ ಅಭಿಮಾನಿಗಳಿಗೆ ಸಂತೋಷದ ಸುದ್ದಿಯಾಗಿದೆ.
********************************************
5.ಮೈಕ್ರೋ ಫೈನಾನ್ಸ್‘ ದಬ್ಬಾಳಿಕೆ ತಡೆಗೆ ಬಿಲ್ ಮಂಡನೆ: ನಿಯಮ ಉಲ್ಲಂಘನೆಗೆ 10 ವರ್ಷಗಳ ಜೈಲು ಶಿಕ್ಷೆ, 5 ಲಕ್ಷ ರೂ ದಂಡ!
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ನಿಯಮ ಉಲ್ಲಂಘನೆಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.5 ಲಕ್ಷ ದಂಡ ವಿಧಿಸುವ ಮಹತ್ವದ ಮಸೂದೆಯೊಂದನ್ನು ವಿಧಾನಸಭೆಯಲ್ಲಿ ಗುರುವಾರ ಕರ್ನಾಟಕ ಸರ್ಕಾರ ಮಂಡಿಸಿತು.
ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ತಡೆ) ಮಸೂದೆ 2025 ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಅವರು ಮಂಡಿಸಿದರು. ಫೆಬ್ರವರಿ 12 ರಂದು ರೂಪಿಸಿದ ‘ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ ಬದಲಿಗೆ ಈ ಮಸೂದೆ ಮಂಡಿಸಲಾಗಿದೆ.
ಶುಭದಿನ