
ಶುಭೋದಯ
ಇನ್ನೊಬ್ಬರ ಹುಚ್ಚುತನ ನಮಗೆ ಕಾಣಿಸುವಷ್ಟು
ಸುಲಭವಾಗಿ ನಮ್ಮ ಹುಚ್ಚುತನ ನಮಗೆ ಕಾಣಿಸದು.
— ಶಿವರಾಮ ಕಾರಂತ.
************************************************************************************
1.ಮಕ್ಕಳು ಪೋಷಕರ ಆರೈಕೆ ಮಾಡದಿದ್ದರೆ ವಿಲ್ ದಾನಪತ್ರ ರದ್ದು
ಮಕ್ಕಳು ಪೋಷಕರ ಆರೈಕೆ ಮಾಡದಿದ್ದರೆ ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ವಿಲ್ ಅಥವಾ ದಾನಪತ್ರ ರದ್ದು ಮಾಡುವ ಅವಕಾಶ ಸಂತ್ರಸ್ಥ ಪೋಷಕರಿಗೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ನ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೇಂದ್ರ ಸರ್ಕಾರ 2007ರಲ್ಲಿ ಜಾರಿಗೆ ತಂದಿರುವ ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆʼಯಲ್ಲಿ ಈ ಅಂಶವಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿ ಇಲ್ಲ’ ಎಂದು ಹೇಳಿದ್ದಾರೆ. ಕಾಯ್ದೆ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ತಿಂಗಳ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು ಎಂದೂ ಸಚಿವರು ತಿಳಿಸಿದ್ದಾರೆ.
********************
2.ಶೇ. 40ರಷ್ಟು ಕಮಿಷನ್: ನಾಗಮೋಹನ್ ದಾಸ್ ಆಯೋಗದಿಂದ ರಾಜಕೀಯ ಪ್ರೇರಿತ ವರದಿ ಸಲ್ಲಿಕೆ- ಆರ್. ಅಶೋಕ್ ಟೀಕೆ
ಬೆಂಗಳೂರು: ಬಿಜೆಪಿ ಅಧಿಕಾರಾವಧಿಯಲ್ಲಿ ಸಿವಿಲ್ ಕಾಮಗಾರಿಗಳಲ್ಲಿ ಶೇ. 40ರಷ್ಟು ಕಮಿಷನ್ ಪಡೆದ ಆರೋಪದ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎಚ್ಎನ್ ನಾಗಮೋಹನ್ ದಾಸ್ ಆಯೋಗವನ್ನು ಕಾಂಗ್ರೆಸ್ ಪ್ರೇರಿತ ಆಯೋಗ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಗುರುವಾರ ಟೀಕಿಸಿದ್ದಾರೆ.
*
*************************************************************************
3.ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ- ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಈಗಿರುವ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತಿಸುತ್ತಿದೆ.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಗುರುವಾರ ವೈದ್ಯರೊಂದಿಗೆ ಸಂವಾದ ನಡೆಸಿದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿ ವಯಸ್ಸನ್ನು ವಿಸ್ತರಿಸಲು ಸರ್ಕಾರ ಚಿಂತಿಸಿರುವುದಾಗಿ ಭರವಸೆ ನೀಡಿದರು.
************************************************************************
4.IPL 2025: ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡಕ್ಕೆ ಸಿಕ್ತು ಸೂಪರ್ ಸಿಹಿ ಸುದ್ದಿ
IPL 2025: 2025ರ ಐಪಿಎಲ್ಗೆ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಗಾಯದಿಂದ ಚೇತರಿಸಿಕೊಂಡಿದ್ದು, ಐಪಿಎಲ್ನಲ್ಲಿ ಆಡಲು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಆದಾಗ್ಯೂ, ಈ ಬಾರಿ ಅವರು ಕೇವಲ ಬ್ಯಾಟ್ಸ್ಮನ್ ಆಗಿ ಆಡಲಿದ್ದಾರೆ ಎಂದು ವರದಿಯಾಗಿದೆ.
****************************************************************************
5.ಭಾಷಾ ವಿವಾದ; ತಮಿಳುನಾಡಿನಲ್ಲಿ ಹಿಂದಿಯ ರೂಪಾಯಿ ಚಿಹ್ನೆಯ ಬದಲು ತಮಿಳು ಭಾಷೆಯ ರೂ. ಬಳಕೆಗೆ ನಿರ್ಧಾರ
ತಮಿಳುನಾಡು ಸರ್ಕಾರ ಹಿಂದಿ ಹೇರಿಕೆಯ ವಿರುದ್ಧ ಗಟ್ಟಿ ನಿಲುವು ಹೊಂದಿದ್ದು, ಹಿಂದಿಯ ₹ ಚಿಹ್ನೆಯನ್ನು ಬಳಸದಿರಲು ತಮಿಳುನಾಡು ಸರ್ಕಾರ ನಿರ್ಧಾರ ಮಾಡಿದೆ. ಇದರ ಬದಲು ತಮಿಳಿನ ರೂ. ಅಕ್ಷರ ಬಳಸಲು ಸ್ಟಾಲಿನ್ ಸರ್ಕಾರ ನಿರ್ಧರಿಸಿದೆ. ಎಂ.ಕೆ. ಸ್ಟಾಲಿನ್ ಸರ್ಕಾರ ರಾಜ್ಯ ಬಜೆಟ್ನಲ್ಲಿ ಅಧಿಕೃತ ರೂಪಾಯಿ ಚಿಹ್ನೆಯನ್ನು ‘₹’ ಸಂಕೇತದ ಬದಲಿಗೆ ತಮಿಳು ಅಕ್ಷರದೊಂದಿಗೆ ಬದಲಾಯಿಸಿದೆ. ಈ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಸ್ಟಾಲಿನ್ ತಮಿಳು ಭಾಷೆಯನ್ನು ರಕ್ಷಿಸುವ ಬಗ್ಗೆ ಧ್ವನಿ ಎತ್ತಿದ್ದಾರೆ.