ಶುಭೋದಯ
ಸದ್ಗುಣ ಮತ್ತು ದುರ್ಗುಣಗಳ ವ್ಯತ್ಯಾಸ
ತಿಳಿಯದಾದಾಗ ನಮ್ಮ ಬೆಳವಣಿಗೆ ನಿಲ್ಲುತ್ತದೆ.
—ಮಹಾತ್ಮಾ ಗಾಂಧಿ.
*****************************************************************************
1.ಗ್ಯಾರಂಟಿಗಳಿಗೆ ಎಸ್ಸಿಪಿ, ಟಿಎಸ್ಪಿ ಹಣ ನೀಡೋದಕ್ಕೆ ವಿರೋಧ: ಸಚಿವ ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರ ಸಭೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಮೀಸಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ ಇದೀಗ ಆ ಬಗ್ಗೆ ಚರ್ಚಿಸಲು ಕಾಂಗ್ರೆಸ್ನ ದಲಿತ ನಾಯಕರು ಸಭೆ ಸೇರಿದ್ದು, ಗ್ಯಾರಂಟಿಗಳಿಗೆ ಹಣ ಬಳಸದಂತೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಒಳ ಮೀಸಲಾತಿ ಮತ್ತು ಹೆಚ್ಚಿನ ಅನುದಾನಕ್ಕಾಗಿ ಮುಖ್ಯಮಂತ್ರಿಯನ್ನು ಭೇಟಿ ಮಾಡಲು ನಿಯೋಗ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

**************************************************************
2.ಹೋರಾಟಕ್ಕೆ ಮಣಿದ ನಮ್ಮ ಮೆಟ್ರೋ: ಕನ್ನಡೇತರ ನೇಮಕಾತಿ ಅಧಿಸೂಚನೆ ವಾಪಸ್
ಕನ್ನಡ ಪ್ರಾಧಿಕಾರ ಮತ್ತು ಹೋರಾಟಗಾರ ಪ್ರತಿಭಟನೆಗೆ ಮಣಿದ ಬೆಂಗಳೂರು ಮೆಟ್ರೋ ರೈಲು ನಿಗಮ 50 ರೈಲು ನಿರ್ವಾಹಕರ ನೇಮಕಾತಿ ಅಧಿಸೂಚನೆಯನ್ನು ಹಿಂಪಡೆದಿದೆ. ಕನ್ನಡೇತರರಿಗೆ ಮಾತ್ರ ಅವಕಾಶ ನೀಡುವ ನಿಯಮ ಕನ್ನಡಪರ ಸಂಘಟನೆಗಳ ಆಕ್ರೋಶ ಹಾಗೂ ಪ್ರತಿಭಟನೆಕ್ಕೆ ಕಾರಣವಾಗಿತ್ತು. ಸದ್ಯ ಎಚ್ಚೆತ್ತಿರುವ BMRCL ನಿರ್ಧಾರ ಕೈಬಿಟ್ಟಿದೆ.

*******************************************************************
3.ದಲಿತರ ಬಗ್ಗೆ ಭಾಷಣ ಮಾಡುವ BJP ಕೇಂದ್ರದಲ್ಲಿ SCSP/TSP ಕಾಯ್ದೆ ಜಾರಿ ಮಾಡಲಿ: ಸಿಎಂ ಸಿದ್ದರಾಮಯ್ಯ ಸವಾಲು
ಬೆಂಗಳೂರು: ದಲಿತರ ಬಗ್ಗೆ ಭಾಷಣ ಮಾಡುವ ಬಿಜೆಪಿ ಕೇಂದ್ರದಲ್ಲಿ ಎಸ್ಸಿಎಸ್ಪಿ/ಟಿಎಸ್ಪಿ ಕಾಯ್ದೆ ಜಾರಿ ಮಾಡಲಿ. ದಲಿತರ, ಹಿಂದುಳಿದವರ ಏಳಿಗೆ ಸಹಿಸದ ಬಿಜೆಪಿಗೆ ದಲಿತರು ದಲಿತರ ಕಾಲೋನಿಯಲ್ಲೇ ಇರಬೇಕು ಎನ್ನುವ ದುರುದ್ದೇಶವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧ ಕಿಡಿಕಾರಿದರು.

*********************************************************************
4. ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ಮಾ. 19ಕ್ಕೆ ಮುಂದೂಡಿಕೆ!
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ಕನ್ನಡ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಮಾರ್ಚ್ 19ಕ್ಕೆ ಮುಂದೂಡಲಾಗಿದೆ. ಸಿಸಿಎಚ್ 64ನೇ ನ್ಯಾಯಾಲಯ ಇಂದು ಪ್ರಕರಣ ವಿಚಾರಣೆ ನಡೆಸಿದ್ದು ಮುಂದಿನ ವಿಚಾರಣೆಗೂ ಮುನ್ನ ಕಂದಾಯ ಗುಪ್ತಚರ ನಿರ್ದೇಶನಾಲಯಕ್ಕೆ (DRI) ತನ್ನ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಿದೆ. ಆಕ್ಷೇಪಣೆ ಸಲ್ಲಿಸಿದ ನಂತರ ಮುಂದಿನ ಪ್ರಕ್ರಿಯೆಗಳು ಮುಂದುವರಿಯುತ್ತವೆ.
ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಕಳೆದ ವಾರ ರನ್ಯಾ ರಾವ್ ಅವರ ಹಿಂದಿನ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ನಟಿಯ ವಿರುದ್ಧದ ಗಂಭೀರ ಆರೋಪಗಳನ್ನು ಉಲ್ಲೇಖಿಸಿ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಅವರ ಪತಿ ಜತಿನ್ ಹುಕ್ಕೇರಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಈ ಹಿಂದೆ ನೀಡಿದ್ದ ತನ್ನ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.

***********************************************************************
5.ಗ್ಯಾರಂಟಿ ಯೋಜನೆಗಳಿಗೆ ಅರ್ಥವಿಲ್ಲ: ಬಿ.ಎಸ್ ಯಡಿಯೂರಪ್ಪ
ಬೆಂಗಳೂರು: ಗ್ಯಾರಂಟಿ ಯೋಜನೆಗಳು ನಿಷ್ಪರಿಣಾಮಕಾರಿ ಮತ್ತು ಅರ್ಥಹೀನ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆದಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಅರ್ಥವಿಲ್ಲ. ಜನರನ್ನು ತೃಪ್ತಿಪಡಿಸಲು ಜಾರಿಗೆ ತಂದ ಯಾವ ಯೋಜನೆಗಳೂ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮತದಾರರನ್ನು ಆಕರ್ಷಿಸಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಯಾವುದೇ ಪ್ರಯೋಜನಗಳಾಗಿಲ್ಲ ಎಂದು ಹೇಳಿದರು.

************************************************************************


[…] https://vicharavisthara.com/a-quick-summary-of-important-news-18-03-2025-2/ […]